ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು

ಗುರುವಾರ ಬೆಳಗ್ಗೆ ಬಂಧನಕ್ಕೊಳಗಾಗಿದ್ದ ತಿಮರೋಡಿ ಅವರನ್ನು ಪೊಲೀಸರು ಮೂರು ಗಂಟೆಗಳ ಕಾಲ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ್ದರು. ನಂತರ, ಸಂಜೆ ಅವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.;

Update: 2025-08-23 12:46 GMT
ಮಹೇಶ್‌ ಶೆಟ್ಟಿ ತಿಮರೋಡಿ 

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ, ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಗುರುವಾರ ಬೆಳಗ್ಗೆ ಬಂಧನಕ್ಕೊಳಗಾಗಿದ್ದ ತಿಮರೋಡಿ ಅವರನ್ನು ಪೊಲೀಸರು ಮೂರು ಗಂಟೆಗಳ ಕಾಲ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ್ದರು. ನಂತರ, ಸಂಜೆ ಅವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ವಿಚಾರಣೆ ವೇಳೆ, ಮಹೇಶ್ ಶೆಟ್ಟಿ ತಿಮರೋಡಿ ಅವರ ಪರವಾಗಿ ವಕೀಲ ವಿಜಯ ವಾಸು ಪೂಜಾರಿ ಅವರು ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ, ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಅವರು ಜಾಮೀನು ನೀಡುವುದಕ್ಕೆ ತೀವ್ರ ಆಕ್ಷೇಪ ಸಲ್ಲಿಸಿದರು.

ವಾದ-ಪ್ರತಿವಾದವನ್ನು ಆಲಿಸಿದ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯವು, ತಿಮರೋಡಿ ಅವರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿತು.

Tags:    

Similar News