ಜಾತಿ ನಿಂದನೆ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು, ಮತ್ತೆ ಬಂಧನ ಸಾಧ್ಯತೆ
ಜಾತಿ ನಿಂದನೆ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಮುನಿರತ್ನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.;
ಜಾತಿ ನಿಂದನೆ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದೀಗ 2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.
ಸದ್ಯ ಮುನಿರತ್ನ ಪರ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಸಂಜೆ ಜೈಲಿನಿಂದ ಮುನಿರತ್ನ ಬಿಡುಗಡೆ ಸಾಧ್ಯತೆ ಇದೆ.
ಆದರೆ ಮುನಿರತ್ನ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬುಧವಾರ (ಸೆ.18) ಮಹಿಳೆಯೊಬ್ಬರು ಅತ್ಯಾಚಾರ ಕೇಸ್ ದಾಖಲಿಸಿದ್ದಾರೆ. ಖಾಸಗಿ ರೆಸಾರ್ಟ್ ನಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ, ಶಾಸಕ ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಅದರಲ್ಲಿ ಶಾಸಕ ಮುನಿರತ್ನ A1 ಆರೋಪಿಯಾಗಿದ್ದಾರೆ. ಮುನಿರತ್ನ ಜೈಲಿನಿಂದ ಬಿಡುಗಡೆಯಾದರೂ ಸಹ ಅತ್ಯಾಚಾರ ಕೇಸ್‌ನಲ್ಲಿ ಮತ್ತೆ ಬಂಧನ ಸಾಧ್ಯತೆ ಇದೆ.
ಕಗ್ಗಲಿಪುರ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದಲೇ ಮುನಿರತ್ನ ಅವರನ್ನು ತಮ್ಮ ವಶಕ್ಕೆ ಪಡೆಯುವ ಸಾಧ್ಯತೆ ಇದೆ.