BANGALORE CAFE BLAST | ಆರೋಪಿಗಳ ವಿರುದ್ಧ ಮತ್ತೊಂದು ಚಾರ್ಜ್​ಶೀಟ್ ಸಲ್ಲಿಸಿದ ಎನ್​ಐಎ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ಆರೋಪಿಗಳಿಬ್ಬರ ವಿರುದ್ಧ ಮತ್ತೊಂದು ಪೂರಕ ಚಾರ್ಜ್​ಶೀಟ್

Update: 2024-09-25 08:18 GMT
ರಾಮೇಶ್ವರಂ ಕೆಫೆ
Click the Play button to listen to article

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ಇಬ್ಬರು ಆರೋಪಿಗಳ ವಿರುದ್ಧ ಪೂರಕ ಚಾರ್ಜ್​ಶೀಟ್ ಸಲ್ಲಿಸಿದೆ.

ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ ಈ ಹಿಂದೆಯೂ ಎನ್​ಐಎ ಚಾರ್ಜ್​ಶೀಟ್ ಸಲ್ಲಿಸಿತ್ತು. ಇದೀಗ ಮತ್ತೊಂದು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ.

ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಅವರುಗಳು ಮುಸ್ಲಿಂ ಯುವಕರನ್ನು ಮೂಲಭೂತವಾದಿ ಚಟುವಟಿಕೆಗಳಿಗೆ ಸೆಳೆಯುತ್ತಿದ್ದರು. ಭಯೋತ್ಪಾದನಾ ಚಟುವಟಿಕೆ ನಡೆಸಲು ಪ್ರಚೋದನೆ ನೀಡುತ್ತಿದ್ದರು. ಭಯೋತ್ಪಾದಕರಿಗೆ ಹಣಕಾಸು ನೆರವನ್ನೂ ನೀಡುತ್ತಿದ್ದರು ಎಂದು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. 

10 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

ಇಬ್ಬರು ಆರೋಪಿಗಳ ವಿರುದ್ಧ ಎನ್‌ಐಎ ಸಲ್ಲಿಸಿರುವ ಮೂರನೇ ಚಾರ್ಜ್‌ಶೀಟ್‌ (ದೋಷಾರೋಪ ಪಟ್ಟಿ) ಸಲ್ಲಿಕೆಯಾಗಿದ್ದು, ಇದರೊಂದಿಗೆ ಪ್ರಕರಣದಲ್ಲಿ ಈವರೆಗೆ 10 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದಂತಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವನ್ನು ಕರ್ನಾಟಕ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು. ನಂತರ ಎನ್ಐಎ ತನಿಖೆ ಕೈಗೆತ್ತಿಕೊಂಡಿತ್ತು.

Tags:    

Similar News