Loksabha Election: ಬೆಂಗಳೂರು ಗ್ರಾ. ಕ್ಷೇತ್ರದಲ್ಲಿ ಅರಸೇನಾಪಡೆ ನಿಯೋಜನೆಗೆ ಬಿಜೆಪಿ ಆಗ್ರಹ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಭಯದ ವಾತಾವರಣ ಇದೆ. ಮತದಾರರು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಬೆದರಿಸಲಾಗುತ್ತಿದೆ. ಈ ಕ್ಷೇತ್ರದಲ್ಲಿ ಅರಸೇನಾಪಡೆ ನಿಯೋಜಿಸಬೇಕು ಬಿಜೆಪಿ ಆಗ್ರಹಿಸಿದೆ.;

Update: 2024-04-18 07:17 GMT
ಬಿಜೆಪಿ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಈ ಬಾರಿ ತೀವ್ರ ಕಾವು ಪಡೆದುಕೊಂಡಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ –ಜೆಡಿಎಸ್ ಮೈತ್ರಿ ಪಕ್ಷಗಳ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ.

ʻಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸೇರಿದಂತೆ ಕರ್ನಾಟಕದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಸೂಕ್ಷ್ಮ ಪರಿಸ್ಥಿತಿ ಇದೆ. ಹೀಗಾಗಿ ಈ ಪ್ರದೇಶಗಳಲ್ಲಿ ಅರಸೇನಾಪಡೆ ನಿಯೋಜಿಸಬೇಕು. ಈ ಸಂಬಂಧ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುತ್ತೇವೆʼ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನಿಲ್‌ಕುಮಾರ್ ತಿಳಿಸಿದ್ದಾರೆ.

ʻಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಬೆದರಿಸಲಾಗುತ್ತಿದ್ದು, ಗೂಂಡಾಗಿರಿ ನಡೆಯುತ್ತಿದೆ. ಮತದಾರರು ನಿರ್ಭೀತಿಯಿಂದ ಮತಚಲಾಯಿಸುವ ವಾತಾವರಣ ಇಲ್ಲ. ಹೀಗಾಗಿ, ಈ ಕ್ಷೇತ್ರದಲ್ಲಿ ಅರೆಸೇನಾಪಡೆ ನಿಯೋಜಿಸಬೇಕುʼ ಎಂದು ಸುನಿಲ್ ಒತ್ತಾಯಿಸಿದರು.

ʻಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್‌ಗಳನ್ನು ದಾಖಲಿಸಿ, ಬೆದರಿಸುವ ತಂತ್ರ ಅನುಸರಿಸುತ್ತಿದೆ. ರೌಡಿಸಂ ಮಾಡಿ ಚುನಾವಣೆ ಗೆಲ್ಲುವುದಕ್ಕೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದು ನಿಲ್ಲಬೇಕು. ಅಲ್ಲದೇ ಭೀತಿಯ ವಾತಾವರಣ ಇರುವ ಬೆಂಗಳೂರು ಗ್ರಾಮಾಂತರ ಹಾಗೂ ನಕ್ಸಲ್‌ ಹಾವಳಿ ಇರುವ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅರಸೇನಾಪಡೆ ನಿಯೋಜಿಸಬೇಕುʼ ಎಂದು ಆಗ್ರಹಿಸಿದರು.  

Tags:    

Similar News