ಬೆಂಗಳೂರಿನಲ್ಲಿ ಭಾರೀ ಮಳೆಗೆ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅನಾಹುತಕ್ಕೆ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಮೊದಲ ಬಲಿಯಾಗಿದೆ. ಇಲ್ಲಿನ 32ವರ್ಷದ ಶಶಿಕಲಾ ಎಂಬುವರು ಗೋಡೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮಾರತ್ತಹಳ್ಳಿ, ವೈಟ್ಫೀಲ್ಡ್ ಸೇರಿದಂತೆ ಹಲವೆಡೆ ರಸ್ತೆಗಳು ನದಿಗಳಾಗಿ ಮಾರ್ಪಟ್ಟಿವೆ. ಭಾನುವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೆ ಸುರಿದ ಧಾರಾಕಾರ ಮಳೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರ ದುಸ್ತರವಾಯಿತು. ಸೋಮವಾರ ಬೆಳಿಗ್ಗೆ ಕಚೇರಿಗಳಿಗೆ ಹೋಗಲು ಜನರು ಪರದಾಡಬೇಕಾಯಿತು.ಸಿಲ್ಕ್ ಬೋರ್ಡ್, ಎಚ್ಆರ್ಬಿಆರ್ ಲೇಔಟ್ ಮತ್ತು ಬೊಮ್ಮನಹಳ್ಳಿ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿಯಿಡೀ ಮಳೆಯಿಂದಾಗಿ ಸ್ಥಳೀಯರು ಜಾಗರಣೆ ಮಾಡಬೇಕಾದ ಪರಿಸ್ಥಿತಿ ಎದುರಾಯಿತು. ರಸ್ತೆಗಳು ಕೆರೆಗಳಂತಾದರೂ ಬಿಬಿಎಂಪಿ ಅಧಿಕಾರಿಗಳು ಇತ್ತ ಮುಖ ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನು ಹೆಣ್ಣೂರು-ಬಾಗಲೂರು ರಸ್ತೆ ಮಳೆ ನೀರಿನಿಂದ ಜಲಾವೃತವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ಪರ್ಯಾಯ ಮಾರ್ಗ ಸೂಚಿಸಲಾಯಿತು. ಆದರೂ, ವಾಹನ ಸವಾರರು ಮಳೆ ನೀರಿನಲ್ಲೇ ಸಾಗುತ್ತಿದ್ದ ದೃಶ್ಯಗಳು ಕಂಡು ಬಂದವು.ರಾಜ್ಯದ ಹಲವೆಡೆ ಧಾರಾಕಾರ ಮಳೆಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರಭಸದ ಮಳೆ ಸಾಕಷ್ಟು ಹಾನಿ ತಂದಿದೆ. ಬೆಂಗಳೂರಿನ ಹೊರಮಾವು ಸಮೀಪದ ಸಾಯಿ ಲೇಔಟ್ ಮಳೆಯಿಂದ ಹೆಚ್ಚು ಹಾನಿಗೊಳಗಾಗಿದೆ. ಬಡಾವಣೆಯಲ್ಲಿ ಎರಡು ದಿನಗಳಿಂದ ಮಳೆ ನೀರು ತುಂಬಿದ್ದು, ನಿವಾಸಿಗಳು ಪರದಾಡುತ್ತಿದ್ದಾರೆ. ಮಳೆ ಹಾನಿ ಪ್ರದೇಶಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರರಾವ್ ಅವರು ಟ್ರ್ಯಾಕ್ಟರ್ನಲ್ಲಿ ಭೇಟಿ ನೀಡಿದ ಪರಿಶೀಲಿಸಿದರು. ಆಗ ಸ್ಥಳೀಯರು ಮುಖ್ಯ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು.ಚರಂಡಿಗಳನ್ನು ಸ್ವಚ್ಛಗೊಳಿಸದಿರುವುದೇ ಅವಾಂತರಕ್ಕೆ ಕಾರಣ. ಅಧಿಕಾರಿಗಳಿಗೆ ಪದೇ ಪದೇ ದೂರು ನೀಡಿದರೂ ಚರಂಡಿಗಳನ್ನು ಸ್ವಚ್ಛಗೊಳಿಸಿಲ್ಲ ಎಂದು ಆರೋಪಿಸಿದರು.ಟ್ಯಾನರಿ ರಸ್ತೆಯಲ್ಲಿರುವ ಎನ್ಸಿ ಕಾಲೋನಿ ಮನೆಗಳಿಗೂ ನೀರು ನುಗ್ಗಿದೆ. ಆದರೆ, ಇದರಿಂದ ಯಾವುದೇ ಹಾನಿಯಾಗಿಲ್ಲ. ಜಯನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮರವೊಂದು ಬುಡಮೇಲಾಗಿ ಕಾರು ಮತ್ತು ಜೀಪ್ ಮೇಲೆ ಬಿದ್ದು ಹಾನಿಯಾಗಿದೆ. ಕೆಲವು ರಸ್ತೆಗಳು ನೀರಿನಿಂದ ತುಂಬಿ ತುಳುಕುತ್ತಿರುವುದರಿಂದ ರಸ್ತೆ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 23 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಬೆಂಗಳೂರು ಸೇರಿದಂತೆ ಕರ್ನಾಟಕದ 23 ಜಿಲ್ಲೆಗಳಲ್ಲಿ ಗುರುವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ನೀಡಿದೆ. ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆ ಅನಾಹುತ ಹೊಸದೇನಲ್ಲಬೆಂಗಳೂರಿನಲ್ಲಿ ಮಳೆ ಅನಾಹುತದ ಬಗ್ಗೆ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು "ಇಂದು ನಾವು ಎದುರಿಸುತ್ತಿರುವ ಸಮಸ್ಯೆಗಳು ಹೊಸವೇನಲ್ಲ. ಮಳೆ ಸಂಬಂಧಿತ ಅನಾಹುತಗಳಿಗೆ ದೀರ್ಘಕಾಲೀನ ಪರಿಹಾರಗಳನ್ನು ಕಂಡುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.