ELECTORAL BONDS:|ನಿರ್ಮಲಾ ಸೀತಾರಾಮನ್, ಬಿ.ವೈ.ವಿಜಯೇಂದ್ರ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ
ಜನಾಧಿಕಾರ ಸಂಘರ್ಷ ಪರಿಷತ್ ಸಹ ಸಂಸ್ಥಾಪಕ ಆದರ್ಶ ಅಯ್ಯರ್ ಎಂಬುವರು ಸಲ್ಲಿಸಿದ್ದು ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲು ತಿಲಕ್ ನಗರ ಠಾಣೆ ಪೊಲೀಸರಿಗೆ ಸೂಚಿಸಿದೆ
ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಲಸಿ, ತನಿಖ ನಡೆಸುವಂತೆ ಬೆಂಗಳೂರಿನ 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಜನಾಧಿಕಾರ ಸಂಘರ್ಷ ಪರಿಷತ್ ಸಹ ಸಂಸ್ಥಾಪಕ ಆದರ್ಶ ಅಯ್ಯರ್ ಎಂಬುವರು ಸಲ್ಲಿಸಿದ್ದು ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲು ತಿಲಕ್ ನಗರ ಠಾಣೆ ಪೊಲೀಸರಿಗೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಮುಂದೂಡಿದೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡರಾದ ನಳಿನ್ ಕುಮಾರ್ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆಯ ಕೆಲಸ ಅಧಿಕಾರಿಗಳ ವಿರುದ್ಧ ದೂರು ದಾಖಲಿಸುವಂತೆಯೂ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
2019 ಏಪ್ರಿಲ್ ತಿಂಗಳಿಂದ 2022 ಆಗಸ್ಟ್ ತಿಂಗಳವರೆಗೆ ಉದ್ಯಮಿ ಅನಿಲ್ ಅಗಲ್ವಾಲ್ ಅವರ ಕಂಪನಿಯಿಂದ ಸುಮಾರು 230 ಕೋಟಿ ರೂ. ಮತ್ತು ಅರಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರೂ.ನಷ್ಟು ಹಣವನ್ನು ಚುನಾವಣಾ ಬಾಂಡ್ ಮೂಲಕ ವಸೂಲಿ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.