ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕೇಂದ್ರಕ್ಕೆ ಬೊಮ್ಮಾಯಿ ಮನವಿ
ಪ್ರಸ್ತುತ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದರಿಂದ ರಾಜ್ಯ ಸರ್ಕಾರದ ಸರಿಯಾದ ನಿರ್ವಹಣೆ ಇಲ್ಲದ ಕಾರಣ ವಾಹನ ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ.;
ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ಮಾಡಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ ಅವರು, ಕಾರವಾರ, ಕೈಗಾ, ಮುಂಡಗೋಡ, ಸವಣೂರು, ಗದಗ, ಗಜೇಂದ್ರಗಡ ಮಾರ್ಗವಾಗಿ ಇಳಕಲ್ ತಲುಪುವ ಸುಮಾರು 318 ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತಾತ್ವಿಕ ಒಪ್ಪಿಗೆ ನೀಡಿದೆ. ಯೋಜನೆಯ ಡಿಪಿಆರ್ ಸಲ್ಲಿಕೆಯಾಗಿದೆ, ಭೂಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಪ್ರಸ್ತುತ, ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದರಿಂದ ರಾಜ್ಯ ಸರ್ಕಾರದ ಸರಿಯಾದ ನಿರ್ವಹಣೆ ಇಲ್ಲದ ಕಾರಣ ವಾಹನ ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಇನ್ನೊಂದೆಡೆ ಯೋಜನೆಗೆ ಅಧಿಕೃತ ಅನುಮತಿ ನೀಡದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪಾಧಿಕಾರದವರೂ ಯಾವುದೇ ಕೆಲಸ ಮಾಡುತ್ತಿಲ್ಲ. ಹೀಗಾಗಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿ ಕಾಮಗಾರಿ ಆರಂಭಿಸುವಂತೆ ವಿನಂತಿಸಿಕೊಂಡಿದ್ದಾರೆ.
ಅಲ್ಲದೇ ಇದಕ್ಕೆ ಹೊಂದಿಕೊಂಡ ಸಂಚರಿಸಲು ಸಾಧ್ಯವಾಗದಿರುವಂತಹ ಇತರ ಸಿಆರ್‌ಎಫ್ ರಸ್ತೆಗಳನ್ನು ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ತಮ್ಮ ಅನುಭವದ ಆಧಾರದಲ್ಲಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.