ಒಳಮೀಸಲಾತಿ ಜಾರಿಗೊಳಿಸಿ, ಇಲ್ಲವೇ ಕುರ್ಚಿ ಖಾಲಿ ಮಾಡಿ: ಸರ್ಕಾರಕ್ಕೆ ಬಿಜೆಪಿ ಶಾಸಕ ಮತ್ತಿಮಡು ಆಗ್ರಹ

ಹರಿಯಾಣ ಮತ್ತು ತೆಲಂಗಾಣದಂತಹ ರಾಜ್ಯಗಳಲ್ಲಿ ಈಗಾಗಲೇ ಒಳಮೀಸಲಾತಿ ಜಾರಿಗೆ ಬಂದಿದೆ. ಇಲ್ಲಿನ ಕಾಂಗ್ರೆಸ್ ಸರಕಾರ ಮಾತ್ರ ಸುಳ್ಳು ಭರವಸೆ ನೀಡಿ ಜನತೆಯನ್ನು ಮಿಥ್ಯೆಗೆ ಒಳಪಡಿಸುತ್ತಿದೆ" ಎಂದು ಬಸವರಾಜ ಮತ್ತಿಮಡು ಟೀಕಿಸಿದರು.;

Update: 2025-08-01 10:22 GMT

ಒಳಮೀಸಲಾತಿ ಜಾರಿ ಮಾಡಲು ಆಗ್ರಹಿಸಿ ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು.  

ರಾಜ್ಯದಲ್ಲಿ ತಕ್ಷಣವೇ ಒಳಮೀಸಲಾತಿ ಜಾರಿ ಮಾಡಬೇಕು, ಇಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ ಸ್ಥಾನವನ್ನು ಖಾಲಿ ಮಾಡಬೇಕು ಎಂದು ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಅವರು ತೀವ್ರವಾಗಿ ಆಗ್ರಹಿಸಿದ್ದಾರೆ.

ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಒಳಮೀಸಲಾತಿ ಜಾರಿಗೆ ಆಗ್ರಹಿಸಿ ದಶಕಗಳಿಂದ ಹೋರಾಟ ನಡೆಯುತ್ತಿದೆ. 2023ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಈ ಬಗ್ಗೆ ಸ್ಪಷ್ಟ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ನಂತರ ಆ ಭರವಸೆಯನ್ನು ಮರೆತು ಸಮುದಾಯಕ್ಕೆ ದ್ರೋಹ ಬಗೆದಿದೆ" ಎಂದು ವಾಗ್ದಾಳಿ ನಡೆಸಿದರು.

"ಹರಿಯಾಣ ಮತ್ತು ತೆಲಂಗಾಣದಂತಹ ರಾಜ್ಯಗಳಲ್ಲಿ ಈಗಾಗಲೇ ಒಳಮೀಸಲಾತಿ ಜಾರಿಯಲ್ಲಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಜನರನ್ನು ವಂಚಿಸುತ್ತಿದೆ. ಈ ಮಿಥ್ಯೆಯನ್ನು ಜನರು ಇನ್ನು ಸಹಿಸುವುದಿಲ್ಲ. ಸರ್ಕಾರಕ್ಕೆ ಬದ್ಧತೆಯಿದ್ದರೆ ತಕ್ಷಣ ಒಳಮೀಸಲಾತಿ ವರದಿಯನ್ನು ಜಾರಿಗೆ ತರಬೇಕು," ಎಂದು ಮತ್ತಿಮಡು ಸವಾಲು ಹಾಕಿದರು. 

Tags:    

Similar News