ಗಣೇಶ ಮೂರ್ತಿ ವಿಸರ್ಜನೆ | 462 ಸಂಚಾರಿ ಟ್ಯಾಂಕರ್, 41 ಕೆರೆ ಗುರುತಿಸಿದ ಬಿಬಿಎಂಪಿ

ಗಣೇಶ ಚತುರ್ಥಿ ಹಬ್ಬದ ಆಚರಣೆಗೆ ಹಿನ್ನಲೆಯಲ್ಲಿ ಗಣಪತಿ ಮೂರ್ತಿ ವಿಸರ್ಜನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಾದ್ಯಂತ 462 ಸಂಚಾರಿ ಟ್ಯಾಂಕರ್‌ಗಳನ್ನು ಸಿದ್ಧಪಡಿಸಿದೆ.

Update: 2024-09-06 08:14 GMT
ಗಣೇಶ್‌ ಚತುರ್ಥಿಗೆ ಬೆಂಗಳೂರು ಸಿದ್ದವಾಗಿದೆ.
Click the Play button to listen to article

ಗಣೇಶ ಚತುರ್ಥಿ ಹಬ್ಬದ ಆಚರಣೆಗೆ ಹಿನ್ನಲೆಯಲ್ಲಿ ಗಣಪತಿ ಮೂರ್ತಿ ವಿಸರ್ಜನೆಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಾದ್ಯಂತ 462 ಸಂಚಾರಿ ಟ್ಯಾಂಕರ್‌ಗಳನ್ನು ಸಿದ್ಧಪಡಿಸಿದೆ.

ನಾಗರೀಕರು ಈ ಸೌಲಭ್ಯಗಳನ್ನು ಪಡೆದುಕೊಂಡು ಮೂರ್ತಿಗಳನ್ನು ಈ ಟ್ಯಾಂಕರ್​ಗಳಲ್ಲಿ ವಿಸರ್ಜಿಸಬಹುದು. ಅಥವಾ ಗಣೇಶ ಮೂರ್ತಿ ವಿಸರ್ಜನೆಗೆ ಗುರುತಿಸಿರುವ ಹತ್ತಿರದ ಕಲ್ಯಾಣಿ ಅಥವಾ ಕೆರೆಗೆ ವಿಸರ್ಜನೆ ಮಾಡಬಹುದು ಎಂದು ಬಿಬಿಎಂಪಿ ತಿಳಿಸಿದೆ. ಈ ಉದ್ದೇಶಕ್ಕಾಗಿ ಸುಮಾರು 41 ಕೆರೆಗಳನ್ನು ಗುರುತಿಸಲಾಗಿದೆ ಮತ್ತು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ತಾತ್ಕಾಲಿಕ ಕಲ್ಯಾಣಿಗಳನ್ನು ನಿರ್ಮಾಣ ಮಾಡಲಾಗಿದೆ.

ಪೆಂಡಾಲ್​ಗೆ ಅರ್ಜಿ ಸಲ್ಲಿಸಲು 63 ಏಕ ಗವಾಕ್ಷಿ ಕೇಂದ್ರ

ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ. 63 ಉಪವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ. ಪಾಲಿಕೆ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳು ಒಂದೇ ಸ್ಥಳದಲ್ಲಿ ಇರಲಿದ್ದಾರೆ. ಈ ಕೇಂದ್ರಕ್ಕೆ ಭೇಟಿ ನೀಡಿ ಅನುಮತಿ ಪತ್ರವನ್ನು ಪಡೆದುಕೊಳ್ಳಬಹುದಾಗಿದೆ. ಗಣೇಶೋತ್ಸವಗಳ ಆಯೋಜಕರು ಈ ಕೇಂದ್ರಗಳ ಮೂಲಕ ಅನುಮತಿಗಾಗಿ ಅರ್ಜಿ ಸಲ್ಲಿಸಬಹುದು ಮತ್ತು ನಗರದಲ್ಲಿ ಗಣೇಶ ಮಂಟಪವನ್ನು ಸ್ಥಾಪಿಸಲು ಇದು ಕಡ್ಡಾಯವಾಗಿದೆ ಎಂದು ಬಿಬಿಎಂಪಿ ಹೇಳಿದೆ.

ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಯಾವ ವಲಯದಲ್ಲಿ ಯಾವ ಅಧಿಕಾರಿಗಳು ಇದ್ದಾರೆ ಹಾಗೂ ಅವರ ದೂರವಾಣಿ ಸಂಖ್ಯೆಯನ್ನು ತಿಳಿದುಕೊಳ್ಳಲು ಬಿಬಿಎಂಪಿಯ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬಹುದು.

ಇಲ್ಲವೇ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ವೆಬ್‌ಸೈಟ್‌ ಲಿಂಕ್ https://apps.bbmpgov.in/ganesh2024/ ಗೆ ಭೇಟಿ ನೀಡಬಹುದು.

Tags:    

Similar News