ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ 18 ವರ್ಷದ ಯುವಕನೋರ್ವ ಅತ್ಯಾಚಾರವೆಸಗಿ, ಆಕೆಯನ್ನು ಕೊಲೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ಅಮೃತಹಳ್ಳಿಯ ಕಾಫಿ ಬೋರ್ಡ್ ಬಳಿ ನಡೆದಿದೆ.
ರಾಯಚೂರು ಮೂಲದ 55 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಆರೋಪಿ ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾನೆ. ನಂತರ ಮಾರ್ಮಾಂಗದ ಮೇಲೆ ವಿಕೃತವಾಗಿ ಹಲ್ಲೆ ಮಾಡಿ, ಹತ್ಯೆಗೈದಿದ್ದಾನೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಮರುದಿನ ಮಾಲೀಕ ಬಂದು ನೋಡಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.
ಅಮೃತಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.