ಜಾಲಹಳ್ಳಿಯಲ್ಲಿ 4 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಮಾರಾಟ ಜಾಲ ಪತ್ತೆ: ಇಬ್ಬರ ಬಂಧನ

ಆಗಸ್ಟ್​ 28ರಂದು ಜಾಲಹಳ್ಳಿಯ ಎಚ್‌ಎಂಟಿ ಫ್ಯಾಕ್ಟರಿ ರಸ್ತೆಯ ಕಾಳಿಂಗರಾವ್ ಸರ್ಕಲ್ ಬಳಿ ಇಬ್ಬರು ವ್ಯಕ್ತಿಗಳು ನಿಷೇಧಿತ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.;

Update: 2025-09-03 06:53 GMT

ಜಾಲಹಳ್ಳಿ ಪೊಲೀಸ್‌ ಠಾಣೆ

Click the Play button to listen to article

ನಗರದಲ್ಲಿ ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು, ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ 4 ಲಕ್ಷ ರೂಪಾಯಿ ಮೌಲ್ಯದ 4.1 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಆಗಸ್ಟ್​ 28ರಂದು ಜಾಲಹಳ್ಳಿಯ ಎಚ್‌ಎಂಟಿ ಫ್ಯಾಕ್ಟರಿ ರಸ್ತೆಯ ಕಾಳಿಂಗರಾವ್ ಸರ್ಕಲ್ ಬಳಿ ಇಬ್ಬರು ವ್ಯಕ್ತಿಗಳು ನಿಷೇಧಿತ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿಯ ಮೇರೆಗೆ, ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಜಾಲಹಳ್ಳಿ ಪೊಲೀಸರ ತಂಡವು ಸ್ಥಳಕ್ಕೆ ಧಾವಿಸಿ ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದೆ.

ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಆರೋಪಿಗಳು

ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದಾಗ, ಅವರು ಅಕ್ರಮವಾಗಿ ಹಣ ಸಂಪಾದಿಸುವ ದುರುದ್ದೇಶದಿಂದ ಈ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಒಡಿಶಾ ರಾಜ್ಯದ ಅಪರಿಚಿತ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ, ಅದನ್ನು ಬೆಂಗಳೂರಿಗೆ ತಂದು ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ಅವರು ಬಾಯ್ಬಿಟ್ಟಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Tags:    

Similar News