Namma Metro | ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಸಚಿವ ಸಂಪುಟ ಅನುಮೋದನೆ

ನಮ್ಮ ಮೆಟ್ರೋದಲ್ಲಿ ಕೇಂದ್ರ ಸರ್ಕಾರವು 50% ಹೂಡಿಕೆಯ ಪಾಲನ್ನು ಹೊಂದಿರುವುದರಿಂದ 28,405 ಕೋಟಿ ರೂಪಾಯಿಗಳ ಅಂದಾಜು ವೆಚ್ಚದ ಯೋಜನೆಯ ಪ್ರಸ್ತಾವನೆಯನ್ನು ಈಗ ಕೇಂದ್ರ ಸಚಿವ ಸಂಪುಟಕ್ಕೆ ಅನುಮೋದನೆಗಾಗಿ ರವಾನಿಸಲಾಗುತ್ತದೆ.

Update: 2024-12-07 08:25 GMT
ನಮ್ಮ ಮೆಟ್ರೋ
Click the Play button to listen to article

ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಮೆಟ್ರೋ 3ನೇ ಹಂತ (ರೆಡ್ ಲೈನ್‌)ಯೋಜನೆಗೆ ಅನುಮೋದನೆ ನೀಡಲಾಗಿದೆ. 

ನಮ್ಮ ಮೆಟ್ರೋದಲ್ಲಿ ಕೇಂದ್ರ ಸರ್ಕಾರವು 50% ಹೂಡಿಕೆಯ ಪಾಲನ್ನು ಹೊಂದಿರುವುದರಿಂದ 28,405 ಕೋಟಿ ರೂಪಾಯಿಗಳ ಅಂದಾಜು ವೆಚ್ಚದ ಯೋಜನೆಯ ಪ್ರಸ್ತಾವನೆಯನ್ನು ಈಗ ಕೇಂದ್ರ ಸಚಿವ ಸಂಪುಟಕ್ಕೆ ಅನುಮೋದನೆಗಾಗಿ ರವಾನಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಜೂನ್ 2024 ರಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 36.59ಕಿ.ಮೀ ಹೆಬ್ಬಾಳ-ಸರ್ಜಾಪುರ ಕಾರಿಡಾರ್‌ಗಾಗಿ ವಿವರವಾದ ಯೋಜನಾ ವರದಿಯನ್ನು (DPR) ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ಅಗರ, ಕೋರಮಂಗಲ, ಡೈರಿ ಸರ್ಕಲ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಈ ಮಾರ್ಗ ಸಾಗಲಿದೆ. ಕೋರಮಂಗಲದಿಂದ ಹೆಬ್ಬಾಳದವರೆಗಿನ ಸುಮಾರು 16.8 ಕಿ.ಮೀ ಮಾರ್ಗವು ಭೂಮಾರ್ಗವಾಗಿ ಸಾಗಲಿದೆ. 

ಬೆಳ್ಳಂದೂರು, ಸೇಂಟ್ ಜಾನ್ಸ್ ಆಸ್ಪತ್ರೆ, ನಿಮ್ಹಾನ್ಸ್, ಸೆಂಟ್ರಲ್ ಕಾಲೇಜು, ಕನ್ನಿಂಗ್‌ಹ್ಯಾಮ್ ರಸ್ತೆ ಮತ್ತು ಮೇಕ್ರಿ ವೃತ್ತದಂತಹ ಪ್ರಮುಖ ಸ್ಥಳಗಳು ಕಾರಿಡಾರ್‌ನಲ್ಲಿ ಸೇರಿವೆ. ಸರ್ಜಾಪುರ ಮತ್ತು ಕೋರಮಂಗಲ 3ನೇ ಬ್ಲಾಕ್ ನಡುವಿನ ಎಲಿವೇಟೆಡ್ ವಿಭಾಗವು 15 ನಿಲ್ದಾಣಗಳನ್ನು ಒಳಗೊಂಡಿದ್ದರೆ, ಕೋರಮಂಗಲ 2ನೇ ಬ್ಲಾಕ್‌ನಿಂದ ಪಶುವೈದ್ಯಕೀಯ ಕಾಲೇಜುವರೆಗಿನ ಸುರಂಗ ಮಾರ್ಗ 11 ನಿಲ್ದಾಣಗಳನ್ನು ಒಳಗೊಂಡಿರುತ್ತದೆ.

ಮೆಟ್ರೋ ಹಂತ- 3 ನೇ ಯೋಜನೆಯು 28,405 ರೂ ಕೋಟಿ ವೆಚ್ಚದಲ್ಲಿ ನಡೆಯಲಿದೆ. 17 ಮೆಟ್ರೋ ನಿಲ್ದಾಣ ಒಳಗೊಂಡ 22.14 ಕಿ.ಮೀ. ಎಲಿವೇಟೆಡ್ ಮಾರ್ಗ ಹಾಗೂ 11 ನಿಲ್ದಾಣ ಒಳಗೊಂಡ 14.45 ಕಿ.ಜೀ. ಸುರಂಗ ಮಾರ್ಗದ ಕಾಮಗಾರಿ ನಡೆಯಲಿದೆ. ಮುಂದಿನ ಒಂದು ವರ್ಷದೊಳಗೆ ಕೇಂದ್ರದ ಅನುಮೋದನೆ ಸಿಗುವ ಸಾಧ್ಯತೆ ಇದೆ. 2026ರಲ್ಲಿ ಇದರ ಕಾಮಗಾರಿ ಆರಂಭವಾದಲ್ಲಿ 2031ಕ್ಕೆ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. 

ಎಲ್ಲೆಲ್ಲಿ ನಿಲ್ದಾಣಗಳು?

ಸರ್ಜಾಪುರ, ಕಾಡ ಅಗ್ರಹಾರ ರೋಡ್, ಸೋಮಪುರ, ದೊಮ್ಮಸಂದ್ರ, ಮುತ್ತನಲ್ಲೂರು ಕ್ರಾಸ್, ಕೊಡತಿ ಗೇಟ್, ಅಂಬೇಡ್ಕರ್ ನಗರ, ಕಾರ್ಮಲ್ ರಾಂ, ದೊಡ್ಡಕನ್ನೆಲಿ, ಕಲ್ಕೊಂಡರಹಳ್ಳಿ, ಬೆಳ್ಳಂದೂರು ಗೇಟ್, ಇಬ್ಬಲೂರು, ಅಗರ, ಜಕ್ಕಸಂದ್ರ, ಕೋರಮಂಗಲ 3ನೇ ಬ್ಲಾಕ್, ಕೋರಮಂಗಲ 2ನೇ ಬ್ಲಾಕ್, ಡೈರಿ ಸರ್ಕಲ್, ನಿಮ್ಹಾನ್ಸ್, ಶಾಂತಿನಗರ, ಟೌನ್ ಹಾಲ್, ಕೆಆರ್ ಸರ್ಕಲ್, ಬಸವೇಶ್ವರ ಸರ್ಕಲ್, ಬೆಂಗಳೂರು ಗಾಲ್ಫ್ ಕೋರ್ಸ್, ಮೇಕ್ರಿ ಸರ್ಕಲ್, ಪ್ಯಾಲೇಸ್ ಗುಟ್ಟಳ್ಳಿ, ವೆಟರ್ನರಿ ಕಾಲೇಜು, ಗಂಗಾನಗರ, ಹೆಬ್ಬಾಳದಲ್ಲಿ ರೈಲು ನಿಲ್ಲಲಿದೆ.

ಆರಂಭದಲ್ಲಿ ಮೆಟ್ರೋ ಹಂತ-3 ನೇ ಯೋಜನೆಗೆ 15,000 ಕೋಟಿ ರೂ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಪರಿಷ್ಕೃತ ಬಜೆಟ್ ಈಗ 28,405 ಕೋಟಿ ರೂ.ಗೆ ತಲುಪಿದೆ. ಇದು ನಮ್ಮ ಮೆಟ್ರೋದ ಇತಿಹಾಸದಲ್ಲಿ ಅತ್ಯಂತ ದುಬಾರಿ ಹಂತವಾಗಿದೆ. ಪ್ರತಿ ಕಿಲೋಮೀಟರ್‌ಗೆ 776 ಕೋಟಿ ರೂ. ವೆಚ್ಚವಾಗುತ್ತದೆ. ಇದರಲ್ಲಿ 10,485 ಕೋಟಿ ಮೊತ್ತದ 35 ಪ್ರತಿಶತದಷ್ಟು ನಿಧಿಯು ದತ್ತಿ ಸಂಸ್ಥೆಗಳಿಂದ ಬರುತ್ತದೆ. ಉಳಿದ ಮೊತ್ತವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಇಕ್ವಿಟಿ, ಭೂ ಸ್ವಾಧೀನ ಮತ್ತು ಜಿಎಸ್‌ಟಿ ಮರುಪಾವತಿ ಸೇರಿದಂತೆ ವಿವಿಧ ವಿಧಾನಗಳ ಮೂಲಕ ಪಡೆಯಲಾಗುತ್ತದೆ.

Tags:    

Similar News