ರಾಬಕೊವಿ ಮೇಲೆ ಕಣ್ಣಿಟ್ಟಿದ್ದ ಭೀಮಾ ನಾಯ್ಕ್‌ಗೆ ನಿರಾಸೆ, ಅಧ್ಯಕ್ಷರಾಗಿ ಶಾಸಕ ರಾಘವೇಂದ್ರ ಹಿಟ್ನಾಳ್‌ ಅವಿರೋಧ ಆಯ್ಕೆ

ಒಕ್ಕೂಟದ ಒಟ್ಟು 12 ನಿರ್ದೇಶಕರ ಸಂಖ್ಯೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್‌ಗೆ ಏಳು ನಿರ್ದೇಶಕರು ಹಾಗೂ ಕೆಎಂಎಫ್‌ ಮಾಜಿ ಅಧ್ಯಕ್ಷ ಭೀಮಾನಾಯ್ಕ್‌ಗೆ ಐದು ನಿರ್ದೇಶಕರ ಬೆಂಬಲವಿತ್ತು.;

Update: 2025-07-25 08:46 GMT

ಶಾಸಕ ರಾಘವೇಂದ್ರ ಹಿಟ್ನಾಳ್‌ ಹಾಗೂ ಕೆಎಂಎಫ್‌ ಮಾಜಿ ಅಧ್ಯಕ್ಷ ಭೀಮಾನಾಯ್ಕ್‌

ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ತಾನೂ ಆಕಾಂಕ್ಷಿ ಎಂದು ಹೇಳಿಕೆ ನೀಡಿದ್ದ ಭೀಮಾನಾಯ್ಕ್‌ಗೆ ತೀವ್ರ ನಿರಾಸೆಯಾಗಿದೆ.

ʼರಾಬಕೊವಿʼ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‌ ಅವಿರೋಧವಾಗಿ ಆಯ್ಕೆಯಾಗಿದ್ದು ತೀವ್ರ ಕೂತುಹಲ ಮೂಡಿಸಿದೆ. 

ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲಾ ಸಹಕಾರ ಹಾಲು ಒಕ್ಕೂಟಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ಒಕ್ಕೂಟದ ಒಟ್ಟು 12 ನಿರ್ದೇಶಕರ ಸಂಖ್ಯೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್‌ಗೆ ಏಳು ನಿರ್ದೇಶಕರು ಹಾಗೂ ಕೆಎಂಎಫ್‌ ಮಾಜಿ ಅಧ್ಯಕ್ಷ ಭೀಮಾನಾಯ್ಕ್‌ಗೆ ಐದು ನಿರ್ದೇಶಕರ ಬೆಂಬಲವಿತ್ತು. ಆದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ್‌  ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎ. ಸತ್ಯನಾರಾಯಣ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು.

ಚುನಾವಣೆಗೆ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಶಾಸಕ ರಾಘವೇಂದ್ರ ಹಿಟ್ನಾಳ್‌ ಹಾಗೂ ಎ. ಸತ್ಯನಾರಾಯಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಬಳ್ಳಾರಿ ಉಪವಿಭಾಗಾಧಿಕಾರಿ ಪ್ರಮೋದ್‌ ತಿಳಿಸಿದ್ದಾರೆ.

ಕೆಎಂಎಫ್‌ ಮಾಜಿ ಅಧ್ಯಕ್ಷ ಭೀಮಾನಾಯ್ಕ್‌ ಅವರನ್ನು ಮಣಿಸುವ ಉದ್ದೇಶದಿಂದಲೇ ಕಳೆದ ಎರಡು ದಿನಗಳ ಹಿಂದೆ, ಸರ್ಕಾರ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‌ ಅವರನ್ನು ಒಕ್ಕೂಟಕ್ಕೆ ನಾಮನಿರ್ದೇಶನ ಮಾಡಿತ್ತು ಎನ್ನಲಾಗಿದೆ. 

ಚುನಾವಣೆಗೂ ಮುನ್ನ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರು ಶಾಸಕ ಹಿಟ್ನಾಳ್‌ ಬಣದ ನಿರ್ದೇಶಕರಿಗೆ ಆತಿಥ್ಯ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಶಾಸಕರ ಬೆಂಬಲದಿಂದಾಗಿಯೇ ಶಾಸಕ ರಾಘವೇಂದ್ರ ಹಿಟ್ನಾಳ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಭೀಮಾನಾಯ್ಕ್‌ಗೆ ಮುಖಭಂಗವಾದಂತಾಗಿದೆ.  

Tags:    

Similar News