ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಇಬ್ಬಾಗ ಅಗತ್ಯ: ಲಕ್ಷ್ಮೀ ಹೆಬ್ಬಾಳ್ಕರ್
ಭೌಗೋಳಿಕವಾಗಿ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯು ದೊಡ್ಡದಾಗಿದ್ದು, ಸಮಗ್ರ ಅಭಿವೃದ್ಧಿಗೆ ಇಬ್ಭಾಗದ ಅಗತ್ಯವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.;
ಭೌಗೋಳಿಕವಾಗಿ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಬೆಳಗಾವಿ ಬೃಹತ್ ಜಿಲ್ಲೆಯಾಗಿದ್ದು, , ಸಮಗ್ರ ಅಭಿವೃದ್ಧಿಗೆ ಇಬ್ಭಾಗದ ಅಗತ್ಯವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಉದ್ದೇಶಗಳಿಗಾಗಿ ಬೆಳಗಾವಿ ಜಿಲ್ಲೆಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಂಗಡಿಸಬೇಕಾಗಿದೆ. ವಿಭಜನೆಯ ಬೇಡಿಕೆ ಈಡೇರಿಸುವಂತೆ ಜಿಲ್ಲೆಯ ಎಲ್ಲ ಶಾಸಕರ ಪತ್ರಗಳನ್ನು ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಸಲ್ಲಿಸಲಾಗುವುದು. ಮೂರು ಹೊಸ ಜಿಲ್ಲೆಗಳಲ್ಲಿ ಎರಡನ್ನು ನಿರ್ಧರಿಸುವುದು ಸರ್ಕಾರಕ್ಕೆ ಬಿಟ್ಟದ್ದು. ಅಥಣಿ ಮತ್ತು ಬೈಲಹೊಂಗಲವನ್ನು ಜಿಲ್ಲೆಗಳನ್ನಾಗಿ ಮಾಡಬೇಕೆಂಬ ಬೇಡಿಕೆಯ ಬಗ್ಗೆ ನನಗೆ ತಿಳಿದಿರಲಿಲ್ಲ ಎಂದು ಅವರು ಹೇಳಿದರು. ದಸರಾ ಹಬ್ಬದ ನಂತರ ರಾಜಕೀಯ ಬೇಧವಿಲ್ಲದೆ ಜಿಲ್ಲೆಯ ಎಲ್ಲ 18 ಶಾಸಕರ ಪತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಭಜನೆಗೆ ಆಗ್ರಹಿಸಿ ಸಲ್ಲಿಸುತ್ತೇವೆ ಎಂದರು.
"ಭೌಗೋಳಿಕವಾಗಿ ಬೆಳಗಾವಿ ದೊಡ್ಡ ಜಿಲ್ಲೆಯಾಗಿದೆ, ಆದ್ದರಿಂದ ಜನಸಂಖ್ಯೆಯು ಹೆಚ್ಚಾಗಿದೆ. ಜಿಲ್ಲೆಯ ನಗರ ಪ್ರದೇಶಗಳು ಸಹ ಹೆಚ್ಚಿನ ಸಂಖ್ಯೆಯ ಮತದಾರರನ್ನು ಹೊಂದಿವೆ. ಅಭಿವೃದ್ಧಿಗಾಗಿ ನಾವು ಎಲ್ಲವನ್ನೂ ತೆಗೆದುಕೊಳ್ಳಬೇಕಾಗಿದೆ ಮತ್ತು ಜಿಲ್ಲೆ ಇಬ್ಭಾಗವಾದರೆ ಮಾತ್ರ ಉತ್ತಮ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಅವರು ಹೇಳಿದರು.
ಅಂದಿನ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರ ಅವಧಿಯಲ್ಲಿ ನಿರ್ಧರಿಸಿದಂತೆ ಚಿಕ್ಕೋಡಿ ಮತ್ತು ಗೋಕಾಕವನ್ನು ಹೊಸ ಜಿಲ್ಲೆಗಳನ್ನಾಗಿ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿರುವ ಕುರಿತು, ಜಾರಕಿಹೊಳಿ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಪ್ರಯತ್ನ
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇವೆ, ಸಭೆಗಳು ನಡೆದಿವೆ. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಚಳವಳಿಯನ್ನು ಮುಂದುವರಿಸುತ್ತೇವೆ. ಮಾಜಿ ಸಚಿವ ಮುರುಗೇಶ್ ನಿರಾಣಿ ಅವರಿಗೆ ಅವಕಾಶ ಸಿಕ್ಕಾಗ ಬೇಡಿಕೆ ಈಡೇರಿಸಲು ಸಾಧ್ಯವಾಗಲಿಲ್ಲ. ಪಂಚಮಸಾಲಿ ಪೀಠದ ಜಯಮೃತುಂಜಯ ಸ್ವಾಮೀಜಿ ಬೇಡಿಕೆ ಈಡೇರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಶೀಘ್ರದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೇಡಿಕೆ ಈಡೇರಿಕೆಗೆ ಮುಂದಾಗುತ್ತೇವೆ ಎಂದು ಹೇಳಿದರು.