ರಾಯಣ್ಣ-ಚನ್ನಮ್ಮ ಬ್ರಿಗೇಡ್‌ಗೆ ದೊಡ್ಡಮಟ್ಟದಲ್ಲಿ ಚಾಲನೆ: ಕೆ.ಎಸ್.ಈಶ್ವರಪ್ಪ

ಹಿಂದೂಗಳ ಪರ ಹೋರಾಟ ನಡೆಸಲು ರಾಯಣ್ಣ-ಚನ್ನಮ್ಮ ಬ್ರಿಗೇಡ್‌ಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಲಾಗುವುದು. ಇದಕ್ಕಾಗಿ ಸದ್ಯವೇ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಬಿಜೆಪಿಯ ಉಚ್ಛಾಟಿತ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.

Update: 2024-09-26 07:11 GMT
ಕೆ.ಎಸ್‌ ಈಶ್ವರಪ್ಪ,
Click the Play button to listen to article

ಹಿಂದೂಗಳ ಪರ ಹೋರಾಟ ನಡೆಸಲು ರಾಯಣ್ಣ-ಚನ್ನಮ್ಮ ಬ್ರಿಗೇಡ್‌ಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಲಾಗುವುದು. ಇದಕ್ಕಾಗಿ ಸದ್ಯವೇ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿಯ ಉಚ್ಛಾಟಿತ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.

ಇತ್ತೀಚೆಗೆ ಗಣೇಶೋತ್ಸವದ ಸಂದರ್ಭದಲ್ಲಿ ಹಿಂದೂಗಳ ಮೇಲೆ ಮುಸ್ಲಿಮರಿಂದ ದಾಳಿ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಹಿಂದೂಗಳಿಗೆ ರಕ್ಷಣೆ ನೀಡುತ್ತಿಲ್ಲ. ಸಮಸ್ತ ಹಿಂದೂಗಳ ರಕ್ಷಣೆಗಾಗಿ ಹಿಂದೂಗಳನ್ನು ಸಂಘಟಿಸಲು ಮತ್ತು ಜಾಗೃತಗೊಳಿಸಲು ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ ಅವರ ಜತೆ ಮಂಗಳವಾರ ರಾತ್ರಿ ನಡೆದ ಮಾತುಕತೆಯಲ್ಲಿ ಚರ್ಚೆ ನಡೆಯಿತು ಎಂದು ಅವರು ಹೇಳಿದ್ದಾರೆ.

ಚನ್ನಮ್ಮ-ರಾಯಣ್ಣ ಬ್ರಿಗೇಡ್‌ಗೆ ಚಾಲನೆ ನೀಡಲು ಸದ್ಯವೇ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು. ಇದಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಆಯ್ದ 1,500 ರಿಂದ 2,000 ಪ್ರಮುಖರನ್ನು ಆಹ್ವಾನಿಸಿ ಚರ್ಚಿಸಲಾಗುವುದು ಎಂದು ಈಶ್ವರಪ್ಪ ಹೇಳಿದರು. ರಾತ್ರಿ ನಡೆದ ಸಭೆಯಲ್ಲಿ ರಾಜಕೀಯ ವಿಚಾರವೂ ಚರ್ಚೆಗೆ ಬಂದಿತು. ಪಕ್ಷಕ್ಕೆ ಸೇರಿಸಿಕೊಳ್ಳುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಅವರು ತಿಳಿಸಿದರು.

Tags:    

Similar News