ದ್ವಿಚಕ್ರ ವಾಹನ ಕಳ್ಳತನ: ಬೆಂಗಳೂರಿನಲ್ಲಿ ಐವರ ಬಂಧನ, 36 ಲಕ್ಷ ರೂ. ಮೌಲ್ಯದ 58 ವಾಹನಗಳು ಜಪ್ತಿ

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಈ ಆರೋಪಿಗಳು ರಸ್ತೆಬದಿ ಮತ್ತು ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ನಕಲಿ ಕೀಗಳನ್ನು ಬಳಸಿ ಕಳ್ಳತನ ಮಾಡುತ್ತಿದ್ದರು.;

Update: 2025-07-16 05:11 GMT

ಸಾಂದರ್ಭಿಕ ಚಿತ್ರ

ಬೆಂಗಳೂರಿನ ರಾಜಗೋಪಾಲನಗರ, ವೈಟ್‌ಫೀಲ್ಡ್, ಮತ್ತು ಮಹದೇವಪುರ ಠಾಣಾ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನದಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿ, ಅವರಿಂದ ಒಟ್ಟು 36 ಲಕ್ಷ ರೂ. ಮೌಲ್ಯದ 58 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಈ ಆರೋಪಿಗಳು ರಸ್ತೆಬದಿ ಮತ್ತು ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ನಕಲಿ ಕೀಗಳನ್ನು ಬಳಸಿ ಕಳ್ಳತನ ಮಾಡುತ್ತಿದ್ದರು. ಕದ್ದ ವಾಹನಗಳನ್ನು ನಂತರ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದರು.

ಪ್ರತ್ಯೇಕವಾಗಿ ನಡೆದ ಕಾರ್ಯಾಚರಣೆಗಳಲ್ಲಿ, ರಾಜಗೋಪಾಲನಗರ ಠಾಣೆಯ ಪೊಲೀಸರು 5.80 ಲಕ್ಷ ರೂ. ಮೌಲ್ಯದ 18 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ವೈಟ್‌ಫೀಲ್ಡ್ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 7 ಲಕ್ಷ ರೂ. ಮೌಲ್ಯದ 12 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹದೇವಪುರ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿ 18 ವಾಹನಗಳನ್ನು ಜಪ್ತಿ ಮಾಡಿದ್ದಾರೆ. 

Tags:    

Similar News