Suicide| ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣು

ತ್ರಿಶಾಲ್ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತ್ರಿಶಾಲ್ ಶುಕ್ರವಾರ (ಜನವರಿ 10) ಮನೆಯಲ್ಲಿ ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಮಾಡಿಕೊಂಡಿದ್ದಾನೆ.;

Update: 2025-01-10 12:34 GMT
ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಸ್ನೇಹಿತರ ನಡುವೆ ನಡೆದ ಗಲಾಟೆ ವಿಷಯಕ್ಕೆ ಮನನೊಂದಿರುವ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ.

ತ್ರಿಶಾಲ್ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತ್ರಿಶಾಲ್ ಶುಕ್ರವಾರ (ಜನವರಿ 10) ಮನೆಯಲ್ಲಿ ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಮಾಡಿಕೊಂಡಿದ್ದಾನೆ.  ಆತ್ಮಹತ್ಯೆಗೂ ಮುನ್ನವೇ ಡೆತ್​ನೋಟ್​ ಬರೆದಿಟ್ಟಿದ್ದಾನೆ.

ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.

ಬಿಜೆಪಿ ಕಾರ್ಯಕರ್ತೆಯಾಗಿರುವ ಶಕುಂತಲಾ ನಟರಾಜ್ ಅವರು ಕಾಂಗ್ರೆಸ್ ವಿರೋಧಿ. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿರುವ ಇವರು ಕಾಂಗ್ರೆಸ್ ನಿಲುವುಗಳನ್ನು ಖಂಡಿಸುತ್ತಲೇ ಇರುತ್ತಾರೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರ ಕುಟುಂಬದ ಬಗ್ಗೆ ಟೀಕಿಸಿ ಬಂಧನಕ್ಕೊಳಗಾಗಿದ್ದರು. ಹಾಗೇ ಇವರ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ಕೂಡ ದಾಖಲಾಗಿವೆ. 

Tags:    

Similar News