Loksabha Election 2024 | ಸಂಸದೆ ಸುಮಲತಾ ದೆಹಲಿ ಭೇಟಿ; ಚಿಕ್ಕಬಳ್ಳಾಪುರದಿಂದ ಸ್ಪರ್ಧೆ ಸಾಧ್ಯತೆ?

ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಹೈಕಮಾಂಡ್‌ ದೆಹಲಿಗೆ ಬರುವಂತೆ ಬುಲಾವ್‌ ನೀಡಿದ್ದು, ಭಾನುವಾರ ಅವರು ದೆಹಲಿಗೆ ತೆರಳಿದ್ದಾರೆ.;

Update: 2024-03-18 06:31 GMT
ಬಿಜೆಪಿ ಹೈಕಮಾಂಡ್ ಕರೆ ಮಾಡಿದ ಹಿನ್ನೆಲೆ ಸುಮಲತಾ ಅಂಬರೀಶ್ ಅವರು ದೆಹಲಿಗೆ ತೆರಳಿದ್ದಾರೆ.

ಮಂಡ್ಯ: ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಹೈಕಮಾಂಡ್‌ ದೆಹಲಿಗೆ ಬರುವಂತೆ ಬುಲಾವ್‌ ನೀಡಿದ್ದು, ಭಾನುವಾರ ಅವರು ದೆಹಲಿಗೆ ತೆರಳಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಜೆಡಿಎಸ್‍ಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವುದು ಫಿಕ್ಸ್ ಆಗಿದೆ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ಸುಮಲತಾಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.

ಹೀಗಾಗಿ ಬಿಜೆಪಿ ಹೈಕಮಾಂಡ್ ಕರೆ ಮಾಡಿದ ಹಿನ್ನೆಲೆ ಸುಮಲತಾ ಅಂಬರೀಶ್ ಅವರು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಹಾಗೂ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ.

2019ರಲ್ಲಿ ಮಂಡ್ಯ ಲೋಕಸಭೆ ಪಕ್ಷೇತರವಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸುಮಲತಾ ಅವರು ನಂತರ ಬಿಜೆಪಿಯನ್ನು ಬೆಂಬಲಿಸಿದ್ದರು. ಅದರಂತೆ ಈ ಬಾರಿ ಮಂಡ್ಯದ ಬಿಜೆಪಿ ಟಿಕೆಟ್​ಗಾಗಿ ಪೈಪೋಟಿ ನಡೆಸುತ್ತಿದ್ದಾರೆ.

ಮಂಡ್ಯ ಬಿಟ್ಟು ಚಿಕ್ಕಬಳ್ಳಾಪುರಕ್ಕೆ?

ಇನ್ನು ಸುಮಲತಾ ಅವರು ಮಂಡ್ಯ ಟಿಕೆಟ್ ಸಿಗದೇ ಹೋದಲ್ಲಿ ಚಿಕ್ಕಬಳ್ಳಾಪುರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಮಾಜಿ ಸಚಿವ ಡಾ. ಕೆ.ಸುಧಾಕರ್‌, ಯಲಹಂಕ ಶಾಸಕ ಎಸ್‌.ಆರ್‌ ವಿಶ್ವನಾಥ್‌ ಅವರ ಪುತ್ರ ಅಲೋಕ್‌ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. 

Tags:    

Similar News