ಸಿಎಂ ಸಿದ್ದರಾಮಯ್ಯ ಕ್ಷಮೆ ಕೋರಿದ ಬಿಜೆಪಿ ನಾಯಕ ಅರವಿಂದ ಬೆಲ್ಲದ

ಶನಿವಾರದಂದು ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ಬೆಲ್ಲದ ಪ್ರಶ್ನಿಸಿದ್ದರು.

Update: 2024-09-03 05:27 GMT

ಬೆಂಗಳೂರು: ಜಿಂದಾಲ್ ಕಂಪನಿಗೆ ಕಡಿಮೆ ದರದಲ್ಲಿ ಸರ್ಕಾರಿ ಜಮೀನು ಮಂಜೂರು ಮಾಡಿರುವುದನ್ನು ಖಂಡಿಸಿ ಸರ್ಕಾರಿ ಜಮೀನು ನಿಮ್ಮ ಅಪ್ಪನ ಮನೆ ಆಸ್ತಿನಾ ಎಂದು ಆರೋಪಿಸಿದ್ದ ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಸಿಎಂ ಸಿದ್ದರಾಮಯ್ಯ ಅವರ ಕ್ಷಮೆ ಕೋರಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ದಿನಾಂಕ: 24/08/2024 ಶನಿವಾರದಂದು ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು  ಹೇಳಿರುತ್ತೇನೆ. ಆ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ, ತಮಗೆ ನಾನು ಈ ಪತ್ರದ ಮುಖಾಂತರ ಕ್ಷಮೆಯಾಚಿಸುತ್ತಿದ್ದೇನೆ ಎಂದು ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ.

 ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್ ಕಂಪನಿಗೆ ವಿಜಯನಗರ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ 3667 ಎಕರೆ ಜಮೀನು ಕಡಿಮೆ ದರದಲ್ಲಿ ಮಾರಾಟ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿತ್ತು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದೇ ಜಮೀನು ಮಂಜೂರು ಮಾಡಿದ್ದನ್ನು ಆಗ ಪ್ರತಿ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ವಿರೋಧಿಸಿದ್ದರು. ಆದರೆ, ಈಗ ಅವರದೇ ಸಂಪುದಲ್ಲಿ ಜಿಂದಾಲ್ ಕಂಪನಿಗೆ ಜಮೀನು ಮಂಜೂರು ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರ ನಡೆಯನ್ನು ಖಂಡಿಸಿದ್ದರು. ಆ ಸಂದರ್ಭದಲ್ಲಿ ಅವರ ವಿರುದ್ದ ವಯಕ್ತಿಕ ಹೇಳಿಕೆ ನೀಡಿದ್ದರು. ಅದು ಸರಿಯಲ್ಲ ಎಂದು ಈಗ ಅವರೇ ಸಿಎಂಗೆ ಪತ್ರ ಬರೆದು ಕ್ಷಮೆ ಕೋರಿದ್ದಾರೆ.

Tags:    

Similar News