ಜಾತಿ ನಿಂದನೆ, ಮಹಿಳೆಯರ ಬಗ್ಗೆ ಅಸಹ್ಯ ಪದ ಬಳಕೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಬಂಧನ

ಕಸ ವಿಲೇವಾರಿ ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಶಾಸಕ ಮುನಿರತ್ನ ಅವಾಚ್ಯವಾಗಿ ನಿಂದಿಸಿರುವ ಹಾಗೂ ಕೊಲೆ ಬೆದರಿಕೆ ಮಾಡಿರುವರೆನ್ನಲಾದ ರುವ ಆಡಿಯೋ ಬಯಲಾದ ಬೆನ್ನಲ್ಲೇ, ಮುನಿರತ್ನ ವಿರುದ್ಧ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದವು. ಆಡಿಯೋದಲ್ಲಿ ದಲಿತರ ಮತ್ತು ಒಕ್ಕಲಿಗ ಮಹಿಳೆಯರ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿ ನಿಂದಿಸಲಾಗಿತ್ತು.

Update: 2024-09-14 15:48 GMT

ಕಸ ವಿಲೇವಾರಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿರುವರೆನ್ನಲಾದ ಆಡಿಯೋ ಬಯಲಾದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಬೆಂಗಳೂರು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಆಂಧ್ರಪ್ರದೇಶಕ್ಕೆ ತಲೆಮರೆಸಿಕೊಳ್ಳುತ್ತಿರುವ ವೇಳೆ ಶನಿವಾರ ಸಂಜೆ ಬಂಧಿಸಿದ್ದಾರೆ.

ಕೋಲಾರ ಮಾರ್ಗವಾಗಿ ಆಂಧ್ರ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಮುಳಬಾಗಲು ತಾಲ್ಲೂಕಿನ ನಂಗಲಿ ಬಳಿ ಕೋಲಾರ ಪೊಲೀಸರ ಸಹಾಯದಿಂದ ಮುನಿರತ್ನ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮುನಿರತ್ನ ವಿರುದ್ಧ ಬೆಂಗಳೂರಿನ ವೈಯ್ಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಕಸ ವಿಲೇವಾರಿ ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಶಾಸಕ ಮುನಿರತ್ನ ಅವಾಚ್ಯವಾಗಿ ನಿಂದಿಸಿರುವರೆನ್ನಲಾದ ರುವ ಆಡಿಯೋ ಬಯಲಾದ ಬೆನ್ನಲ್ಲೇ, ಮುನಿರತ್ನ ವಿರುದ್ಧ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದವು. ಆಡಿಯೋದಲ್ಲಿ ದಲಿತರ ಮತ್ತು ಒಕ್ಕಲಿಗ ಮಹಿಳೆಯರ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿ ಶಾಸಕರು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಬಂಧನಕ್ಕೆ ಕೆಲ ತಾಸುಗಳ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮುನಿರತ್ನ, ಆಡಿಯೋ ತೆಗೆದುಕೊಂಡು ಈಗಲೇ ಸ್ಪೀಕರ್ ಕಚೇರಿಗೆ ಚಲುವರಾಜು ಬರಲಿ. ಎರಡು ಸಮುದಾಯ ಸೇರಿ ನನ್ನನ್ನು ಮುಗಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ. ಒಂದು ತಿಂಗಳ ಹಿಂದೆ ಇದೇ ಚಲುವರಾಜು ನನ್ನನ್ನು ಶ್ಲಾಘಿಸಿದ್ದರು. 7-8 ವರ್ಷಗಳಿಂದ ನನ್ನ ಜೊತೆಯಲ್ಲಿದ್ದರು, ಈಗ ನಾನು ಹಣ ಕೇಳ್ತೀನಾ? ರಾಜಕೀಯ ಪಿತೂರಿಯಿಂದ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ತಿಂಗಳ ಹಿಂದೆ ನನ್ನ ಬಳಿ ಬಂದು ಯಾರೋ ಹಲ್ಲೆ ಮಾಡಿದ್ದರು ಅಂದಿದ್ದರು. ನಾನು ಎಲ್ಲೂ ನಾಪತ್ತೆಯಾಗಿಲ್ಲ. ನನ್ನ ಸ್ನೇಹಿತರ ಮೂಲಕ ಭೇಟಿ ಮಾಡಲು ಚಲುವರಾಜು ಯತ್ನಿಸಿದ್ದರು” ಎಂದಿದ್ದರು.

ಆದರೆ, ಅವರು ಕೋಲಾರ ಮಾರ್ಗವಾಗಿ ಅಂಧ್ರದಲ್ಲಿ ತಲೆಮರೆಸಿಕೊಳ್ಳಲು ತೆರಳುತ್ತಿದ್ದರು. "ನಾನು ಕಾನೂನಿನ ಮೊರೆ ಹೋಗುತ್ತೇನೆ. ನಾನು ಯಾವುದೇ ರೀತಿ ಭ್ರಷ್ಟಾಚಾರ ನಡೆಸಿಲ್ಲ. ಕಾಂಗ್ರೆಸ್‌ನಲ್ಲಿದ್ದಾಗ ಅವರಿಗೆ ನಾನು ತುಂಬಾ ಒಳ್ಳೆಯ ವ್ಯಕ್ತಿಯಾಗಿದ್ದೆ. ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟಿದ್ದಕ್ಕೆ ಈಗ ನಾನು ಕೆಟ್ಟವನಾಗಿಬಿಟ್ಟಿದ್ದೇನೆ," ಎಂದೂ ಮುನಿರತ್ನ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಪ್ರತಿಕ್ರಿಯಿಸಿದ್ದರು.

ಕೋಲಾರ: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೋಲಾರದ ಮುಳಬಾಗಿಲು ಬಳಿ ಶಾಸಕರನ್ನು ವಶಕ್ಕೆ ಪಡೆದಿರುವ ಆರಕ್ಷಕರು ರಾಜಧಾನಿಯತ್ತ ಕರೆತರುತ್ತಿದ್ದಾರೆ.

ಏನಿದು ಪ್ರಕರಣ?

ಶಾಸಕ ಮುನಿರತ್ನ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಬಿಡುಗಡೆ ಮಾಡಿದ್ದ ಗುತ್ತಿಗೆದಾರ ಚಲುವರಾಜು, ಮುನಿರತ್ನ ಅವರಿಂದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದಂತೆ ಕೊಲೆ ಮಾಡುವ ಜೀವ ಬೆದರಿಕೆ ಹಾಗೂ ಕಿರುಕುಳವಿದೆ ಎಂದು ಶುಕ್ರವಾರ ಪ್ರೆಸ್‌ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು. ಈ ಕುರಿತು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ ಅವರಿಗೂ ಲಿಖಿತ ದೂರು ಸಲ್ಲಿಸಿದ್ದು, ಮುನಿರತ್ನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿದ್ದರು.

"ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿದೇವಿನಗರ ವಾರ್ಡ್‌ನ ಡಿ ದೇವರಾಜು ಅರಸು ಟ್ರಕ್‌ ಟರ್ಮಿನಲ್‌ ಪ್ರದೇಶದ ಘನ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಗುತ್ತಿಗೆ ಪಡೆದು ಕೆಲಸ ಮಾಡುತ್ತಿದ್ದೆ. ಶಾಸಕ ಮುನಿರತ್ನ 36 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದಾರೆ," ಎಂದು ಚಲುವರಾಜು ಆರೋಪಿಸಿದ್ದರು.

ಶಾಸಕ ಮುನಿರತ್ನ ಅವರ ಧ್ವನಿಯದ್ದು ಎನ್ನಲಾದ ಆಡಿಯೋದಲ್ಲಿ ನಿರ್ದಿಷ್ಟ ಸಮುದಾಯದ ಜಾತಿ ನಿಂದನೆ ನಡೆದಿದೆ. ಅಶ್ಲೀಲ ಪದಗಳನ್ನು ಬಳಸಲಾಗಿದೆ. ಚಲವರಾಜು ಅವರ ಕುಟುಂಬದ ಹೆಣ್ಣಮಕ್ಕಳ ಕುರಿತಾಗಿಯೂ ಬೈಗುಳದ ಮಾತುಗಳನ್ನಾಡಲಾಗಿದೆ. ಈ ನಡುವೆ ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ಲಂಚಕ್ಕೆ ಬೇಡಿಕೆ, ಕೊಲೆ ಬೆದರಿಕೆ, ಜಾತಿ ನಿಂದನೆ, ಮಹಿಳೆಯರ ವಿರುದ್ದ ಅಶ್ಲೀಲ ಭಾಷೆ ಬಳಕೆ ಸಂಬಂಧದ ಆರೋಪದಡಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮುನಿರತ್ನ ಸಹಾಯಕರಾದ ವಿಜಿ ಕುಮಾರ್‌, ಅವರ ಭದ್ರತಾ ಸಿಬ್ಬಂದಿ ಅಭಿಷೇಕ್‌ ಹಾಗೂ ವಸಂತ್‌ ಕುಮಾರ್‌ ವಿರುದ್ಧವೂ ದೂರು ದಾಖಲಾಗಿತ್ತು.

Tags:    

Similar News