ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್

ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.;

Update: 2024-09-20 06:16 GMT
ಶಾಸಕ ಮುನಿರತ್ನ ಅವರನ್ನು ಮತ್ತೆ ಬಂಧಿಸಲಾಗಿದೆ.

ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​ ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಿಡುಗಡೆಯಾಗಿ ಕೆಲವೇ ತಾಸಿನಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.

ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಬಿಬಿಎಂಪಿ ಗುತ್ತಿಗೆದಾರನೊಬ್ಬನಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ದಲಿತರಿಗೆ ಜಾತಿ ನಿಂದನೆ ಮಾಡಿದ್ದರು. ಜೊತೆಗೆ, ಜೀವ ಬೆದರಿಕೆ ಹಾಗೂ ವಂಚನೆಯನ್ನೂ ಮಾಡಿದ್ದಾರೆ ಎಂದು ಕೇಸ್ ದಾಖಲಿಸಲಾಗಿತ್ತು. ಈ ಬಗ್ಗೆ ಆಡಿಯೋ ಸಮೇತ ದೂರು ನೀಡಲಾಗಿದ್ದ ಆಧಾರದಲ್ಲಿ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಗುರುವಾರ ಜಾಮೀನು ಮೂಲಕ ಹೊರಬಂದಿದ್ದರು.

Tags:    

Similar News