ಪರಪ್ಪನ ಅಗ್ರಹಾರ ಜೈಲಿನಿಂದ ಬಿಜೆಪಿ ಶಾಸಕ ಮುನಿರತ್ನ ಬಿಡುಗಡೆ
ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ.;
ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ.
ಜೈಲಿನಿಂದ ಶಾಸಕರ ಬಿಡುಗಡೆ ಹಿನ್ನೆಲೆ ಬೆಂಬಲಿಗರು ಸಿ ಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವೈಯಾಲಿಕಾವಲ್‌ನಲ್ಲಿರುವ ಮುನಿರತ್ನ ನಿವಾಸದೆದುರು ಬೆಂಬಲಿಗರು ಸಂಭ್ರಮಿಸಿದರು.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಮುನಿರತ್ನ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ನ್ಯಾಯಾಲಯವು ಮುನಿರತ್ನ ಅವರಿಗೆ ಮಂಗಳವಾರ ಶರತ್ತುಬದ್ದ ಜಾಮೀನು ನೀಡಿ, 1 ಲಕ್ಷ ರೂ. ಪರ್ಸನಲ್ ಬಾಂಡ್ ಮತ್ತು ಇಬ್ಬರ ಶೂರಿಟಿ ನೀಡುವಂತೆ ಷರತ್ತು ವಿಧಿಸಿತ್ತು.'
ಏನಿದು ಪ್ರಕರಣ?
ರಾಮನಗರದ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಅವರು ವಿರುದ್ಧ 40 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದರು. ಅಲ್ಲದೇ ಪ್ರಕರಣದಲ್ಲಿ 7 ಮಂದಿಯ ವಿರುದ್ಧ ಎಫ್ಐಆರ್ ಆಗಿತ್ತು. ಸದ್ಯ ಸರ್ಕಾರ ಪ್ರಕರಣಗಳ ತನಿಖೆಯನ್ನು ಎಸ್ಐಟಿಗೆ ವರ್ಗಾವಣೆ ಮಾಡಿದೆ. ಇನ್ನು, ಜಾತಿನಿಂದನೆ ಪ್ರಕರಣ ದಾಖಲಾಗುತ್ತಿದ್ದಂತೆ ಶಾಸಕ ಮುನಿರತ್ನ ಅವರ ವಿರುದ್ಧ ಒಕ್ಕಲಿಗ ಹಾಗೂ ದಲಿತ ಸಂಘಟನೆಗಳು ರಾಜ್ಯದಾದ್ಯಂತ ಭಾರೀ ಪ್ರತಿಘಟನೆ ನಡೆಸಿದ್ದವು. ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮುನಿರತ್ನ ಅವರ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು, ಇದರ ನಡುವೆಯೇ ಬಿಜೆಪಿ ನಾಯಕರು ಕೂಡ ಅಚ್ಚರಿ ವ್ಯಕ್ತಪಡಿಸಿದ್ದರು. ಇದರೊಂದಿಗೆ ಮುನಿರತ್ನ ಒಬ್ಬಂಟಿಯಾದರಾ ಎಂಬ ಪ್ರಶ್ನೆ ಎದುರಾಗಿತ್ತು.