ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ

ಈಗ ನನಗೆ 80 ವರ್ಷ ವಯಸ್ಸಾಗಿದೆ. ಚುನಾವಣಾ ರಾಜಕೀಯದಲ್ಲಿ ಇರದಿದ್ದರೂ ರಾಜಕಾರಣದಲ್ಲಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಇರುತ್ತೇನೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಹೇಳಿದ್ದಾರೆ.

Update: 2024-03-18 07:16 GMT
ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ
Click the Play button to listen to article

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ಸೋಮವಾರ(ಮಾ.18) ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಈಗ ನನಗೆ 80 ವರ್ಷ ವಯಸ್ಸಾಗಿದೆ. ಚುನಾವಣಾ ರಾಜಕೀಯದಲ್ಲಿ ಇರದಿದ್ದರೂ ರಾಜಕಾರಣದಲ್ಲಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಇರುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸ ಮಾಡುವುದಿಲ್ಲ ಎಂದು ಸಂಸದರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ ಎಪ್ಪತ್ತು ವರ್ಷ ವಯಸ್ಸಿಗೆ ನಿವೃತ್ತಿಯಾಗಬೇಕು. ಈಗ ನನಗೆ ಎಂಬತ್ತೊಂದು ವರ್ಷ ವಯಸ್ಸಾಗಿದೆ. ಅರ್ಥಪೂರ್ಣ ಸಮಾರಂಭವನ್ನೂ‌ ಆಚರಣೆ ಮಾಡಿಕೊಂಡಿದ್ದೇವೆ. ನನಗೆ ಪಕ್ಷದಲ್ಲಿ ಟಿಕೆಟ್ ಕೊಡುವುದಿಲ್ಲ ಅಂತ ಪ್ರಧಾನಿ ಮೋದಿ ಹೇಳಿಬಿಟ್ಟಿದ್ದಾರೆ. ಹೀಗಾಗಿ ನಿವೃತ್ತಿಯಾಗುತ್ತಿದ್ದೇನೆ ಎಂದು ಬಚ್ಚೇಗೌಡ ಈ ಹಿಂದೆ ಹೇಳಿದ್ದರು.

ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಮ್ಮದೇ ಆದ ರಾಜಕೀಯ ಹಿಡಿತವನ್ನು ಬಚ್ಚೇಗೌಡರು ಹೊಂದಿದ್ದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿದ ಕೀರ್ತಿ ಬಿ.ಎನ್. ಬಚ್ಚೇಗೌಡರಿಗೆ ಸಲ್ಲುತ್ತದೆ.

Tags:    

Similar News