ಹುಬ್ಬಳ್ಳಿ ಪ್ರಕರಣ ವಾಪಸ್ | ಸಿಎಂ ಕಾರಿಗೆ ಕಪ್ಪುಬಟ್ಟೆ ಪ್ರದರ್ಶಿಸಿ ಬಿಜೆಪಿ ಪ್ರತಿಭಟನೆ
ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಸವದತ್ತಿಗೆ ತೆರಳುವ ವೇಳೆ ಬಿಜೆಪಿ ಕಾರ್ಯಕರ್ತರು ಸಿಎಂ ಅವರಿಗೆ ಕಪ್ಪುಬಟ್ಟೆ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಶಾಸಕರಿಬ್ಬರು ಅಕ್ಷಯ ಪಾರ್ಕ್ ವೃತ್ತದಲ್ಲಿ ವಾಹನ ಸಂಚಾರ ತಡೆದು, ಧರಣಿ ನಡೆಸಿದರು.;
ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಸಿಎಂ ತೆರಳುತ್ತಿದ್ದ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಶಾಸಕರಾದ ಅರವಿಂದ ಬೆಲ್ಲದ, ಮಹೇಶ್ ಟೆಂಗಿನಕಾಯಿ ನೂರಾರು ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಶಾಸಕರು ಸೇರಿದಂತೆ ಪ್ರತಿಭಟನಾನಿರತರನ್ನು ವಶಕ್ಕೆ ಪಡೆದು, ಹಳೆ ಸಿಎಆರ್ ಮೈದಾನಕ್ಕೆ ಕರೆತಂದು ನಂತರ ಬಿಡುಗಡೆ ಮಾಡಿದರು.
ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಸವದತ್ತಿಗೆ ತೆರಳುವ ವೇಳೆ ಬಿಜೆಪಿ ಕಾರ್ಯಕರ್ತರು ಸಿಎಂ ಅವರಿಗೆ ಕಪ್ಪುಬಟ್ಟೆ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಶಾಸಕರಿಬ್ಬರು ಅಕ್ಷಯ ಪಾರ್ಕ್ ವೃತ್ತದಲ್ಲಿ ವಾಹನ ಸಂಚಾರ ತಡೆದು, ಧರಣಿ ನಡೆಸಿದರು.
ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ಸಿಎಂ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ. ದೇಶದ್ರೋಹ ಕಾಯ್ದೆಯಡಿ ದಾಖಲಾಗಿರುವ ಪ್ರಕರಣ ಹಿಂಪಡೆದರೆ ಸಮಾಜಕ್ಕೆ ತಪ್ಪು ಸಂದೇಶ ಹೋಗಲಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಪ್ರಕರಣ ಹಿಂಪಡೆಯಬಾರದು ಎಂದು ಆಗ್ರಹಿಸಿದರು.
ಇನ್ನು ಬಿಜೆಪಿ ಮುಖಂಡರು ವಿಮಾನ ನಿಲ್ದಾಣದಲ್ಲಿ ಸಿಎಂಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಆದರೆ, ಪೊಲೀಸರು ಮುತ್ತಿಗೆ ಯತ್ನ ವಿಫಲಗೊಳಿಸಿದ ಹಿನ್ನೆಲೆಯಲ್ಲಿ ಗೋಕುಲ ರಸ್ತೆಯಲ್ಲಿ ಸಿಎಂ ಅವರ ಕಾರು ತಡೆದು ಪ್ರತಿಭಟನೆಗೆ ಮುಂದಾದರು. ಆಗ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದರು.