ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ಫೀಡರ್ ಸೇವೆ ಆರಂಭಿಸಿದ ಬಿಎಂಟಿಸಿ

ಮೆಟ್ರೋ ಪ್ರಯಾಣಿಕರಿಗೆ ಸುಗಮ ಸಂಪರ್ಕ ಒದಗಿಸಲು ಬಿಎಂಟಿಸಿ ಇಂದಿನಿಂದ ಫೀಡರ್ ಬಸ್ ಸೇವೆ ಆರಂಭಿಸಿದೆ.;

Update: 2025-08-11 06:39 GMT

ಬಿಬಿಎಂ ಫೀಡರ್‌ ಬಸ್‌ 

ʼನಮ್ಮ ಮೆಟ್ರೋʼ ಹಳದಿ ಮಾರ್ಗಕ್ಕೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದು, ಇಂದಿನಿಂದ ಮೆಟ್ರೋ ಸಂಚಾರ ಆರಂಭವಾಗಿದೆ. ಈ ನಿಟ್ಟಿನಲ್ಲಿ ಆರ್.ವಿ.ರಸ್ತೆ -ಬೊಮ್ಮಸಂದ್ರ ಮಾರ್ಗದಲ್ಲಿ ಇಂದಿನಿಂದಲೇ  ಬಿಎಂಟಿಸಿ ಸಂಸ್ಥೆ ಫೀಡರ್ ಬಸ್ ಆರಂಭಿಸಿದೆ. 

ಬೊಮ್ಮಸಂದ್ರ ಮಾರ್ಗದಲ್ಲಿ ಮೆಟ್ರೋ ಪ್ರಯಾಣಿಕರಿಗೆ ಸುಗಮ ಸಂಪರ್ಕ ಒದಗಿಸಲು ಬಿಎಂಟಿಸಿ, ಮೊದಲಿಗೆ ಬೊಮ್ಮಸಂದ್ರದಿಂದ ಹೆಬ್ಬಗೋಡಿ ಹಾಗೂ ಕೋನಪ್ಪನ ಅಗ್ರಹಾರದಿಂದ ಎಲೆಕ್ಟ್ರಾನಿಕ್ ಮಾರ್ಗಗಳಲ್ಲಿ ಫೀಡರ್ ಬಸ್‌ಗಳನ್ನು ಪ್ರಾರಂಭಿಸಿದೆ. 

ಎಲೆಕ್ಟ್ರಾನಿಕ್ ಸಿಟಿಯ ವಿಪ್ರೋ ಗೇಟ್‌ನಿಂದ ಬೆಳಿಗ್ಗೆ 8.20 ರಿಂದ ಸಂಜೆ 4.55ರವರೆಗೆ ನಾಲ್ಕು ಬಸ್​ಗಳು 32 ರೌಂಡ್ಸ್​ಗಳಲ್ಲಿ ಸಂಚರಿಸಲಿವೆ. ಎಲೆಕ್ಟ್ರಾನಿಕ್ ಸಿಟಿಯ ವಿಪ್ರೋ ಗೇಟ್‌ನಿಂದ ಕೋನಪ್ಪನ ಅಗ್ರಹಾರ, ಹೊಸ ರೋಡ್, ಕಸವನಹಳ್ಳಿ, ಕೈಕೊಂಡ್ರಹಳ್ಳಿ ಮಾರ್ಗದ ಮೂಲಕ ದೊಡ್ಡಕನ್ನೆಲ್ಲಿ ಬಸ್ ನಿಲ್ದಾಣದವರೆಗೆ ಸಂಚರಿಸಲಿವೆ.

ಕೋನಪ್ಪನ ಅಗ್ರಹಾರದಿಂದ ಎಲೆಕ್ಟ್ರಾನಿಕ್ ಸಿಟಿ, ಹುಸ್ಕೂರು ಗೇಟ್, ಚಿಂತಲ ಮಡಿವಾಳ, ಮುತ್ತಾನಲ್ಲೂರು ವೃತ್ತ, ತಿಮ್ಮಸಂದ್ರ ವೃತ್ತ ಮತ್ತು ಚಂದಾಪುರ ವೃತ್ತ ಮಾರ್ಗದಲ್ಲಿ ನಾಲ್ಕು ಬಸ್​ಗಳು 20 ರೌಂಡ್‌ಗಳಲ್ಲಿ ಬೆಳಿಗ್ಗೆ 8.40 ರಿಂದ ಸಂಜೆ 4.50 ರವರೆಗೆ ಕಾರ್ಯನಿರ್ವಹಿಸಲಿವೆ. ಬೊಮ್ಮಸಂದ್ರದಿಂದ ಎಲೆಕ್ಟ್ರಾನಿಕ್ ಸಿಟಿ ವಿಪ್ರೋ ಗೇಟ್‌ಗೆ, ತಿರುಪಾಳ್ಯ ವೃತ್ತ, ಎಸ್-ಮಾಂಡೋ-3, ಮತ್ತು ಹೆಬ್ಬಗೋಡಿ ಮಾರ್ಗದಲ್ಲಿ 2 ಬಸ್‌ಗಳು 20 ರೌಂಡ್‌ಗಳಲ್ಲಿ ಸಂಚರಿಸಲಿವೆ.

Tags:    

Similar News