ಹುಬ್ಬಳ್ಳಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ: ತೀವ್ರ ಭದ್ರತೆ

ಇತ್ತೀಚೆಗೆ ರಾಜ್ಯದಲ್ಲಿ ಇಂತಹ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ ತಿಂಗಳು ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಡಲಿದ್ದ ಇಂಡಿಗೋ ವಿಮಾನಕ್ಕೆ ಬೆದರಿಕೆ ಸಂದೇಶ ಬಂದಿತ್ತು.;

Update: 2025-06-30 04:34 GMT

ಭಾನುವಾರ ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಸ್ಫೋಟದ ಬೆದರಿಕೆ ಸಂದೇಶ ಬಂದಿದ್ದು, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಈ ಬೆದರಿಕೆಯ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತೆಯನ್ನು ತಕ್ಷಣವೇ ಹೆಚ್ಚಿಸಲಾಗಿದೆ.

ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಹಾಗೂ ಗುಪ್ತಚರ ಇಲಾಖೆಯ ಸಿಬ್ಬಂದಿ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ಇಂತಹ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ ತಿಂಗಳು ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಡಲಿದ್ದ ಇಂಡಿಗೋ ವಿಮಾನಕ್ಕೆ ಬೆದರಿಕೆ ಸಂದೇಶ ಬಂದಿತ್ತು. ಅದಾದ ಕೆಲ ದಿನಗಳ ನಂತರ ಬೆಂಗಳೂರು ವಿಮಾನ ನಿಲ್ದಾಣಕ್ಕೂ ಇದೇ ರೀತಿಯ ಬೆದರಿಕೆ ಕರೆ ಬಂದಿತ್ತು. ಬೆಂಗಳೂರು, ಹಾಸನ ಮತ್ತು ಉಡುಪಿಯ ಕೆಲವು ಶಾಲೆಗಳಿಗೂ ಬೆದರಿಕೆ ಸಂದೇಶಗಳು ಬಂದಿದ್ದವು. ನಂತರದ ಪೊಲೀಸ್ ತನಿಖೆಯಲ್ಲಿ, ತನ್ನ ಮಾಜಿ ಪ್ರಿಯಕರನ ಮೇಲಿನ ದ್ವೇಷದಿಂದ ಮಹಿಳೆಯೊಬ್ಬಳು ಇಂತಹ ಸಂದೇಶಗಳನ್ನು ಕಳುಹಿಸುತ್ತಿರುವುದು ಪತ್ತೆಯಾಗಿ, ಆಕೆಯನ್ನು ಬಂಧಿಸಲಾಗಿತ್ತು. 

Tags:    

Similar News