ಬೆಂಗಳೂರಿನ ಪ್ರತಿಷ್ಠಿತ ರೆಸ್ಟೋರೆಂಟ್‌ಗೆ ಹುಸಿ ಬಾಂಬ್‌ ಬೆದರಿಕೆ: ಆರೋಪಿ ವಶಕ್ಕೆ

ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್​​​​ಗೆ ರಾತ್ರಿ ಬಾಂಬ್ ಕರೆ ಬಂದಿದ್ದು, ಶೀಘ್ರವೇ ಬಾಂಬ್ ಬ್ಲಾಸ್ಟ್ ಆಗುತ್ತದೆ ಎಂದು ಬೆದರಿಸಲಾಗಿತ್ತು.

Update: 2024-03-28 11:05 GMT
ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್​​​​ಗೆ ರಾತ್ರಿ ಬಾಂಬ್ ಕರೆ ಬಂದಿದೆ.
Click the Play button to listen to article

ವೈಟ್​ಫೀಲ್ಡ್​​ ಬಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಘಟನೆ ಮಾಸುವ ಮುನ್ನವೇ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಶೀಘ್ರವೇ ಬಾಂಬ್ ಬ್ಲಾಸ್ಟ್ ಆಗುತ್ತದೆ ಎಂದು ಬೆದರಿಸಲಾಗಿತ್ತು.

ಬುಧವಾರ(ಮಾ. 27) ರಾತ್ರಿ ಬಂದ ಬೆದರಿಕೆ ಕರೆಯಿಂದ ಗಾಬರಿಗೊಂಡ ರೆಸ್ಟೋರೆಂಟ್ ಸಿಬ್ಬಂದಿ, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಾತ್ರಿ ಇಡೀ ಪರಿಶೀಲನೆ ನಡೆಸಿದ್ದಾರೆ. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಲಿಲ್ಲ. ನಂತರ ಇದು ಹುಸಿ ಕರೆ ಎಂದು ತಿಳಿದು ಬಂದಿದೆ.

ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತ ಅದೇ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಲು ಎಂದು ಗುರುತಿಸಲಾಗಿದೆ. ಸಂಬಳ ಕೊಟ್ಟಿಲ್ಲ ಎಂದು ಸಿಟ್ಟಿನಲ್ಲಿ ಈತ ಹುಸಿ ಕರೆ ಮಾಡಿದ್ದನು ಎಂದು ವಿಚಾರಣೆ ವೇಳೆ ಬಯಲಾಗಿದೆ. ಈ ಸಂಬಂಧ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ಚ್‌ 1ರಂದು ಬೆಂಗಳೂರು ನಗರದ ವೈಟ್‌ಫೀಲ್ಡ್‌ ಬಳಿ ಇರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿತ್ತು. ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಮತ್ತು ಎನ್​ಐಎ ಅಧಿಕಾರಿಗಳು ಶಂಕಿತ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೂ ಮುನ್ನ ಬೆಂಗಳೂರಿನ 20ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದವು.

Tags:    

Similar News