ನೀತಿ ಆಯೋಗದ ಸಭೆ ಬಹಿಷ್ಕಾರ: ಸಿ.ಎಂ ವಿರುದ್ಧ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಕಿಡಿ

ಜು.27 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸಲು ಕಾಂಗ್ರೆಸ್‌ ನಿರ್ಧರಿಸಿದೆ. ಆ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Update: 2024-07-24 13:34 GMT
ಆರ್‌ ಅಶೋಕ್‌

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕೇಂದ್ರ ಸರ್ಕಾರದ ಈ ತಾರತಮ್ಯ ನೀತಿಯನ್ನು ಖಂಡಿಸಿರುವ ಸಿ.ಎಂ ಸಿದ್ದರಾಮಯ್ಯ ಅವರು, ಜು.27ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.

ಇದೀಗ ಸಿದ್ದರಾಮಯ್ಯನವರ ಈ ನೀತಿಯನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದು, ಸಿದ್ದರಾಮಯ್ಯ ಸಿ.ಎಂ ಆಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿರುವುದು ನಾಚಿಕೆಗೇಡಿನ ಸಂಗತಿ. ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸಲು ಕಾಂಗ್ರೆಸ್‌ ನಿರ್ಧರಿಸಿದೆ.

ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ INCindia ಹೈಕಮಾಂಡ್‌ನ ಕ್ಷುಲ್ಲಕ ರಾಜಕೀಯಕ್ಕಿಂತ ನೀವು ರಾಜನೀತಿಯನ್ನು ತೋರಿಸುತ್ತೀರಿ ಎಂದು ಕರ್ನಾಟಕದ ಜನರು ನಿರೀಕ್ಷಿಸಿದ್ದಾರೆ.

ಆಡಳಿತ ಮತ್ತು ಅಭಿವೃದ್ದಿ ಪಕ್ಷ ರಾಜಕಾರಣಕ್ಕಿಂತ ಮಿಗಿಲಾಗಿ ಭಾರತ ಸರ್ಕಾರದ ಸರ್ವೋಚ್ಚ ಸಾರ್ವಜನಿಕ ನೀತಿ ಚಿಂತಕರ ಸಭೆಯನ್ನು ಬಹಿಷ್ಕರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು 6.5 ಕೋಟಿ ಕನ್ನಡಿಗರಿಗೆ ಮತ್ತು ಅವರು ನೀಡಿದ ಜನಾದೇಶಕ್ಕೆ ಅವಮಾನ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

Tags:    

Similar News