ಬ್ರಾಹ್ಮಣ vs ಲಿಂಗಾಯತ ದಂಗಲ್ ಸಾರಿದ ದಿಂಗಾಲೇಶ್ವರ ಶ್ರೀ ನಾಮಪತ್ರ ವಾಪಸ್?

ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ ಅವರಿಗೆ ಬೆಂಬಲ ಘೋಷಣೆ ಮಾಡಲಿದ್ದಾರೆ ಎಂದು ʻದ‌ ಫೆಡರಲ್-ಕರ್ನಾಟಕʼಕ್ಕೆ ಶ್ರೀಗಳ ಅಪ್ತ ಮೂಲಗಳು ತಿಳಿಸಿವೆ.

Update: 2024-04-22 05:15 GMT

ಧಾರವಾಡ ಲೋಕಸಭಾ ಕ್ಷೇತ್ರದದಲ್ಲಿ ಸಂಚಲನ ಮೂಡಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ ವಿಚಾರ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.

ತಮ್ಮ ನಾಮಪತ್ರವನ್ನು ಹಿಂಪಡೆಯುವ ನಿರ್ಧಾರಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಬಂದಿದ್ದಾರೆ ಎಂದು ʻದ‌ ಫೆಡರಲ್-ಕರ್ನಾಟಕʼಕ್ಕೆ ಶ್ರೀಗಳ ಅಪ್ತ ಮೂಲಗಳು ತಿಳಿಸಿವೆ. ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ ಅವರಿಗೆ ಬೆಂಬಲ ಘೋಷಣೆ ಮಾಡಲಿದ್ದಾರೆ.ತಮ್ಮ ನಾಮಪತ್ರವನ್ನು ಹಿಂಪಡೆಯುವ ನಿರ್ಧಾರಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಬಂದಿದ್ದಾರೆ ಎಂದು ʻದ‌ ಫೆಡರಲ್-ಕರ್ನಾಟಕʼಕ್ಕೆ ಶ್ರೀಗಳ ಅಪ್ತ ಮೂಲಗಳು ತಿಳಿಸಿವೆ. ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ ಅವರಿಗೆ ಬೆಂಬಲ ಘೋಷಣೆ ಮಾಡಲಿದ್ದಾರೆ.

ಇತ್ತೀಚೆಗೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಬಿಜೆಪಿ ನಾಯಕರು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಿರುವುದರಿಂದ ದಿಂಗಾಲೇಶ್ವರ ಶ್ರೀಗಳು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದರೆ ಬಿಜೆಪಿ ಮತಗಳಷ್ಟೇ ಅಲ್ಲದೇ ಕಾಂಗ್ರೆಸ್‌ ಮತಗಳನ್ನು ಪಡೆಯುವ ಸಾಧ್ಯತೆ ಇದ್ದು, ಮತ್ತೆ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಗೆಲುವು ಸುಲಭವಾಗಬಹುದು ಎನ್ನುವ ಕಾರಣಕ್ಕೆ ಸ್ವಾಮೀಜಿ ನಾಮಪತ್ರ ಹಿಂಪಡೆದು ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ ಸೂಚಿಸಲು ಸಿದ್ದರಾಗಿದ್ದಾರೆ ಎಂದು ತಿಳಿದುಬಂದಿದೆ.

ಇಂದು (ಸೋಮವಾರ) ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ದಿಂಗಾಲೇಶ್ವರ ಮುಂದಿನ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

Tags:    

Similar News