BSY POCSO Case | ಯಡಿಯೂರಪ್ಪ ಬಂಧಿಸದಂತೆ, ವಿಚಾರಣೆಗೆ ವಿನಾಯ್ತಿ ನೀಡಿದ್ದ ಆದೇಶ ವಿಸ್ತರಣೆ

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹಾಗೂ ವಿಚಾರಣೆಗೆ ಖುದ್ದು ಹಾಜರಾಗಲು ವಿನಾಯಿತಿ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.;

Update: 2024-07-26 11:40 GMT
ಬಿ.ಎಸ್‌ ಯಡಿಯೂರಪ್ಪ
Click the Play button to listen to article

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹಾಗೂ ವಿಚಾರಣೆಗೆ ಹಾಜರಾಗಲು ವಿನಾಯಿತಿ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.

ನೆರವು ಕೇಳಿ ಬಂದಿದ್ದ ಹದಿನೇಳು ವರ್ಷದ ಅತ್ಯಾಚಾರ ಸಂತ್ರಸ್ತೆಯ ಮೇಲೆ ಲೌಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಮತ್ತು ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ನ್ಯಾಯಮೂರ್ತಿಗಳು, ಸಂಸದರು ಮತ್ತು ಶಾಸಕರ ವಿರುದ್ಧ ಪ್ರಕರಣಗಳನ್ನು ಮತ್ತೊಂದು ಪೀಠದಲ್ಲಿ ನಿಗದಿಪಡಿಸಲಾಗಿದೆ. ಆದ್ದರಿಂದ ಆ ಪೀಠದಲ್ಲಿಯೇ ನಿಮ್ಮ ಮನವಿಯನ್ನು ಸಲ್ಲಿಸಬಹುದು ಎಂದು ಹೇಳಿ ವಿಚಾರಣೆಯನ್ನು ಒಂದು ವಾರ ಮುಂದೂಡಿದರು. ಅಲ್ಲದೇ, ಈ ಹಿಂದೆ ನೀಡಿದ್ದ ಆದೇಶವನ್ನು ವಿಸ್ತರಿಸಿ ಆದೇಶಿಸಿದರು.

ಪ್ರಕರಣದ ಹಿನ್ನೆಲೆ

ಅತ್ಯಾಚಾರ ಪ್ರಕರಣವೊಂದರಲ್ಲಿ ಪೊಲೀಸರು ನ್ಯಾಯಯುತವಾಗಿ ತನಿಖೆ ನಡೆಸುತ್ತಿಲ್ಲ. ಸರಿಯಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ತಾಕೀತು ಮಾಡುವಂತೆ ಸರ್ಕಾರದ ಗಮನಕ್ಕೆ ತನ್ನಿ ಎಂದು ನೆರವು ಕೇಳಲು ಬಂದಿದ್ದ ಬಿಜೆಪಿ ಪಕ್ಷದ ಕಾರ್ಯಕರ್ತೆಯೊಬ್ಬರ ಸಂತ್ರಸ್ತ ಪುತ್ರಿಯ ಮೇಲೆ ಬೆಂಗಳೂರಿನ ತಮ್ಮ ನಿವಾಸದಲ್ಲೇ ಲೌಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಬಿಜೆಪಿ ಹಿರಿಯ ನಾಯಕ ಬಿ ಎಸ್‌ ಯಡಿಯೂರಪ್ಪ ಮೇಲಿದೆ.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಬಿ ಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಸಂಬಂಧ ಕಳೆದ ಮಾರ್ಚ್0 14 ರಂದು ಬಿಜೆಪಿ ಕಾರ್ಯಕರ್ತೆಯೊಬ್ಬರು ದೂರು ನೀಡಿದ್ದರು. ತಮ್ಮ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಡೆದಿರುವ ಲೌಂಗಿಕ ದೌರ್ಜನ್ಯ ಪ್ರಕರಣದಲ್ಲಿ ನೆರವು ನೀಡಿ ಎಂದು ಕೇಳಲು ಫೆಬ್ರವರಿ 2 ರಂದು ಸದಾಶಿವನಗರದ ಅವರ ಮನೆಯಲ್ಲಿ ಭೇಟಿ ನೀಡಿದಾಗ ತನ್ನ ಮಗಳನ್ನು ತಮ್ಮ ಕೋಣೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ ಪೋಕ್ರೋ ಪ್ರಕರಣ ದಾಖಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿ ತನಿಖೆಗೆ ವಹಿಸಿತ್ತು.

Tags:    

Similar News