ಪೋಕ್ಸೋ ಪ್ರಕರಣ | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಸಿಐಡಿ ನೋಟಿಸ್
ಪೋಕ್ಸೋ ಪ್ರಕರಣದಲ್ಲಿ ಸಿಐಡಿ ಪೊಲೀಸರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ನೊಟೀಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.;
ಪೋಕ್ಸೋ ಪ್ರಕರಣದಲ್ಲಿ ಸಿಐಡಿ ಪೊಲೀಸರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ನೊಟೀಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಅಪ್ತಾಪ್ರೆಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎನ್ನಲಾದ ಪೋಕ್ಸೋ ಕಾಯ್ದೆ ಅಡಿಯ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕಳೆದ ಮಾಚ್ 14ರಂದು ದೂರು ದಾಖಲಾಗಿತ್ತು. ಅದಾದ ಬಳಿಕ ಕರ್ನಾಟಕ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು.
ರಿಟ್ ಅರ್ಜಿ ಸಲ್ಲಿಕೆ
ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಘಟನೆ ನಡೆದು ಹಲವು ತಿಂಗಳುಗಳಾದರೂ ಪೊಲೀಸರಿಂದ ಕ್ರಮವಿಲ್ಲ. ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಮಾಜಿ ಸಿಎಂ ಬಿಎಸ್‌ವೈ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ಕನಿಷ್ಠ 41ಎ ಅಡಿ ನೊಟೀಸ್ ನೀಡಿ ಯಡಿಯೂರಪ್ಪರನ್ನು ವಿಚಾರಣೆಗೆ ಕರೆದಿಲ್ಲ. ಈ ಮಧ್ಯೆ, ದೂರುದಾರರಾಗಿರುವ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಬಂಧಿಸುವಂತೆ ನಿರ್ದೇಶಿಸಬೇಕೆಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಏನಿದು ಪ್ರಕರಣ?
ಫೆಬ್ರವರಿ 2 ರಂದು ಯಡಿಯೂರಪ್ಪ ಅವರು ಭೇಟಿಯ ನೆಪದಲ್ಲಿ ತನ್ನ ಮಗಳನ್ನು ಕೋಣೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 17 ವರ್ಷದ ಯುವತಿಯ ತಾಯಿ ಆರೋಪ ಮಾಡಿದ್ದರು. ಘಟನೆ ನಂತರ ಯಡಿಯೂರಪ್ಪ ವಿರುದ್ಧ ಪ್ರಕರಣ ಸಹ ದಾಖಲಾಗಿತ್ತು. ಬಾಲಕಿಯ ತಾಯಿಗೆ ಪೊಲೀಸರಿಗೆ ದೂರು ಕೊಡುವುದು ಒಂದು ಹವ್ಯಾಸವಾಗಿದೆ ಎಂದು ಯಡಿಯೂರಪ್ಪ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದರು.
ಪ್ರಕರಣ ರದ್ದು ಕೋರಿ ಕೋರ್ಟ್ ಮೊರೆ
ಈ ನಡುವೆ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕರ್ನಾಟಕ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ.
ನಾನು ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಆದರೂ ನಾನು ಠಾಣೆಗೆ ಹಾಜರಾಗಿದ್ದೆ, ಅಲ್ಲಿ ಘಟನೆಯನ್ನು ವಿವರಿಸಿದ್ದೆ. ಆ ವೇಳೆ ಪೊಲೀಸರು ಹೇಳಿಕೆಯನ್ನು ದಾಖಲು ಮಾಡಿಕೊಳ್ಳುವ ಬದಲಾಗಿ ಧ್ವನಿ ಮಾದರಿ ಸಂಗ್ರಹಿಸಿದ್ದರು ಎಂದು ಹೈಕೋರ್ಟ್‌ಗೆ ಮಾಡಿದ ಮನವಿಯಲ್ಲಿ ಯಡಿಯೂರಪ್ಪ ಉಲ್ಲೇಖ ಮಾಡಿದ್ದಾರೆ.
ಸಂತ್ರಸ್ತೆಯ ತಾಯಿ ಸಾವು
ಈ ಎಲ್ಲಾ ಬೆಳವಣಿಗೆ ನಡುವೆ ಬಿವೈಎಸ್ ವಿರುದ್ಧ ಆರೋಪ ಮಾಡಿದ್ದ ಮಹಿಳೆ ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ. ಸಂತ್ರಸ್ತ ಬಾಲಕಿಯ ತಾಯಿಯಾದ ಅವರ ಸಾವು ಕೂಡ ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗೆ ಅನುವು ಮಾಡಿಕೊಟ್ಟಿತ್ತು. ದೂರುದಾರ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದು, ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿತ್ತು.