Building Collapse | ಮತ್ತೊಬ್ಬ ಕಾರ್ಮಿಕನ ಶವ ಪತ್ತೆ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಭಾರೀ ಮಳೆಗೆ ಬೆಂಗಳೂರಿನ ಬಾಬುಸಾಪಾಳ್ಯ ಕಟ್ಟಡ ಕುಸಿದು ಮೂರು ದಿನಗಳ ಬಳಿಕ ರಕ್ಷಣಾ ತಂಡ ಶುಕ್ರವಾರ ಮತ್ತೊಬ್ಬ ಕಟ್ಟಡ ಕಾರ್ಮಿಕನ ಮೃತದೇಹವನ್ನು ಹೊರತೆಗೆದಿದ್ದು, ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.;

Update: 2024-10-25 08:58 GMT
Building Collapse | ಮತ್ತೊಬ್ಬ ಕಾರ್ಮಿಕನ ಶವ ಪತ್ತೆ, ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಬೆಂಗಳೂರು ಕಟ್ಟಡ ದುರಂತ

ಬೆಂಗಳೂರಿನ ಬಾಬುಸಾಪಾಳ್ಯ ಕಟ್ಟಡ ಕುಸಿದು ಮೂರು ದಿನಗಳ ಬಳಿಕ ರಕ್ಷಣಾ ತಂಡ ಶುಕ್ರವಾರ ಮತ್ತೊಬ್ಬ ಕಟ್ಟಡ ಕಾರ್ಮಿಕನ ಮೃತದೇಹವನ್ನು ಹೊರತೆಗೆದಿದ್ದು, ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಕಟ್ಟದ ಅವಶೇಷಗಳಲ್ಲಿ ಹೂತುಹೋಗಿದ್ದ ಕಾರ್ಮಿಕ ಎಳುಮಲೈ ಅವರ ಶವವನ್ನು ಬೆಳಿಗ್ಗೆ 10.40 ರ ಸುಮಾರಿಗೆ ಹೊರತೆಗೆಲಾಯಿತು ಎಂದು  ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರು ಇತ್ತೀಚಿನ ಕಟ್ಟಡ ಗುತ್ತಿಗೆದಾರರಾಗಿದ್ದು, ಎಫ್‌ಐಆರ್‌ನಲ್ಲಿ ಹೆಸರೂ ಇದೆ. ಎಲ್ಲಾ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಶೀಘ್ರದಲ್ಲೇ ರಕ್ಷಣಾ ಕಾರ್ಯಾಚರಣೆಯನ್ನು ಹಿಂಪಡೆಯಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ತಿಳಿಸಿದ್ದಾರೆ.

ಅ. 22 ರಂದು ಅಪರಾಹ್ನ 3:40 ರ ಸುಮಾರಿಗೆ ಪೂರ್ವ ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿತ್ತು. ಎನ್‌ಡಿಆರ್‌ಎಫ್, ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳೊಂದಿಗೆ ಶೋಧ ಕಾರ್ಯಾಚರಣೆ ಆರಂಭಿಸಿ ಹದಿನಾಲ್ಕು ಜನರನ್ನು ರಕ್ಷಿಸಲಾಯಿತು. ಆದರೆ ಅವಶೇಷಗಳಡಿ ಸಿಲುಕಿದ್ದ ಎಳುಮಲೈ ಸೇರಿದಂತೆ ಒಂಬತ್ತು ಕಟ್ಟಡ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದಾರೆ. ಎಲ್ಲಾ ಶವಗಳನ್ನು ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬುಧವಾರ (ಅ.23) ಪೊಲೀಸರು ಆಸ್ತಿಯ ಮಾಲೀಕ ಮುನಿ ರೆಡ್ಡಿ ಮತ್ತು ಆತನ ಮಗ ಭುವನ್ ರೆಡ್ಡಿಯನ್ನು ಬಂಧಿಸಿದ್ದಾರೆ. ಕಟ್ಟಡದ ನಾಲ್ಕನೇ ಮಹಡಿ ನಿರ್ಮಾಣದವರೆಗೆ ಗುತ್ತಿಗೆದಾರರಾಗಿದ್ದ ಮುನಿಯಪ್ಪ ಎಂಬುವರನ್ನು ಬಂಧಿಸಲಾಗಿದೆ. ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತರು ಸ್ವಯಂ ಪ್ರೇರಿತ ಕ್ರಮವನ್ನು ಸಹ ಪ್ರಾರಂಭಿಸಿದ್ದಾರೆ.

Tags:    

Similar News