Bus Fare Hike | ಬಸ್‌ ಪ್ರಯಾಣ ದರ ಏರಿಕೆ ಇಂದಿನಿಂದಲೇ ಜಾರಿ: ಎಲ್ಲಿ, ಎಷ್ಟು ಹೆಚ್ಚಳ?

ಬಸ್ ದರ ಏರಿಕೆಯ ಕುರಿತು ರಾಜ್ಯ ಸಾರಿಗೆ ಇಲಾಖೆ ಶನಿವಾರ ಅಧಿಕೃತ ಆದೇಶ ಹೊರಡಿಸಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ಬಸ್ ಪ್ರಯಾಣ ದರ ಶನಿವಾರ ಮಧ್ಯರಾತ್ರಿಯಿಂದಲೇ ಶೇ.15ರಷ್ಟು ಹೆಚ್ಚಳವಾಗಲಿದೆ ಎಂದು ಹೇಳಿದೆ.;

Update: 2025-01-04 12:03 GMT
bus fare hike

ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಏರಿಕೆ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.

ಬಸ್ ದರ ಏರಿಕೆಯ ಕುರಿತು ರಾಜ್ಯ ಸಾರಿಗೆ ಇಲಾಖೆ ಶನಿವಾರ ಅಧಿಕೃತ ಆದೇಶ ಹೊರಡಿಸಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ಬಸ್ ಪ್ರಯಾಣ ದರ ಶನಿವಾರ ಮಧ್ಯರಾತ್ರಿಯಿಂದಲೇ ಶೇ.15ರಷ್ಟು ಹೆಚ್ಚಳವಾಗಲಿದೆ ಎಂದು ಹೇಳಿದೆ.

ಕೆಎಸ್ಆರ್ಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ಸಾರಿಗೆ ನಿಗಮಗಳಲ್ಲಿ 2020ರಲ್ಲಿ ಪ್ರಯಾಣ ದರ ಪರಿಷ್ಕರಣೆ ಮಾಡಲಾಗಿತ್ತು. ಬಿಎಂಟಿಸಿಯಲ್ಲಿ 2015ರಲ್ಲಿ ದರ ಪರಿಷ್ಕರಣೆ ಮಾಡಲಾಗಿತ್ತು. ನಿಗಮದ ಸಿಬ್ಬಂದಿಯ ವೇತನ ಹೆಚ್ಚಳ, ಇಂಧನ ವೆಚ್ಚ ಹಾಗೂ ನಿಗಮಗಳ ನಿರ್ವಹಣಾ ವೆಚ್ಚಗಳನ್ನು ಪರಿಗಣನೆಗೆ ತೆಗೆದುಕೊಂಡು ಪ್ರತಿಬಾರಿ ಪ್ರಯಾಣ ದರ ಹೆಚ್ಚಳ ಮಾಡಲಾಗುತ್ತಿದೆ. ಸದ್ಯ ಸಿಬ್ಬಂದಿ ವೆಚ್ಚ ಸೇರಿ ಸಾರಿಗೆ ನಿಗಮಗಳಿಗೆ ವಾರ್ಷಿಕ 3650 ಕೋಟಿ ರೂಪಾಯಿ ಹೊರೆಯಾಗುತ್ತಿದೆ. ಆ ಹಿನ್ನೆಲೆಯಲ್ಲಿ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿದ್ದು, ಶೇ.15ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಸಭೆಯಲ್ಲಿ ನಿರ್ಣಯಿಸಿ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದು ಆದೇಶದಲ್ಲಿ ಹೇಳಲಾಗಿದೆ.

ನಾಲ್ಕು ಸಾರಿಗೆ ನಿಗಮಗಳಲ್ಲಿ ಒಟ್ಟು 1,01,648 ಸಿಬ್ಬಂದಿ ಇದ್ದು, ಈ ಸಿಬ್ಬಂದಿಯ ವೇತನ ಮತ್ತು ಭತ್ಯೆಗಳನ್ನು ಆಯಾ ನಿಗಮಗಳ ಆದಾಯದಿಂದಲೇ ಪಾವತಿಸಲಾಗುತ್ತಿದೆ. 2024-25ನೇ ಹಣಕಾಸು ವರ್ಷದಲ್ಲಿ ಏಪ್ರಿಲ್ 1ರಿಂದ ನವೆಂಬರ್ 30ರವರೆಗೆ ನಾಲ್ಕೂ ನಿಗಮಗಳ ಒಟ್ಟು ಆದಾಯ 8418.46 ಕೋಟಿ ರೂ.ಗಳಾಗಿದ್ದರೆ, ಒಟ್ಟು ವೆಚ್ಚ 9511.41 ಕೋಟಿ ರೂ.ಗಳಾಗಿದೆ. ಅಂದರೆ, ಆದಾಯ ಮತ್ತು ವೆಚ್ಚದ ನಡುವೆ 1092.95 ಕೋಟಿ ರೂ. ಕೊರತೆ ಇದೆ. ಆ ಹಿನ್ನೆಲೆಯಲ್ಲಿ ದರ ಹೆಚ್ಚಳ ಅನಿವಾರ್ಯವಾಗಿದೆ ಎಂದೂ ಹೇಳಲಾಗಿದೆ.

ಬಿಎಂಟಿಸಿ ಹೊರತುಪಡಿಸಿ ಕೆಎಸ್ಆರ್ಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ನಿಗಮಗಳ ಆರ್ಥಿಕ ಪರಿಸ್ಥಿತಿ ಸುಧಾರಣೆ ಮತ್ತು ಕರ್ಚುವೆಚ್ಚಗಳ ನಿರ್ವಹಣೆಗಾಗಿ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.33ರಷ್ಟು ಹೆಚ್ಚಿಸುವಂತೆ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇ.42ರಷ್ಟು ಹೆಚ್ಚಿಸುವಂತೆ ಸರ್ಕಾರಕ್ಕೆ ಕೋರಲಾಗಿತ್ತು. ಆದರೆ, ಸರ್ಕಾರ ಆ ಪ್ರಸ್ತಾಪವನ್ನು ತಿರಸ್ಕರಿಸಿ ಶೇ.15ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಅನುಮೋದನೆ ನೀಡಿ ಆದೇಶಿಸಿದೆ ಎಂದು ಸರ್ಕಾರ ಹೇಳಿದೆ.

ಕಳೆದ ಗುರುವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಸ್ ಪ್ರಯಾಣ ದರ ಹೆಚ್ಚಳದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿತ್ತು.

ಕೆಎಸ್‌ಆರ್‌ಟಿಸಿ ದರ ಹೆಚ್ಚಳ ಎಲ್ಲಿ? ಎಷ್ಟು?



Tags:    

Similar News