ಬಿ.ಎಲ್. ಸಂತೋಷ್ ಭೇಟಿಯಾದ ಬಿ.ವೈ. ವಿಜಯೇಂದ್ರ; ಮಾತುಕತೆ

"ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಸನ್ಮಾನ್ಯ ಶ್ರೀ ಬಿ.ಎಲ್. ಸಂತೋಷ್ ಜೀ ಅವರನ್ನು ಭೇಟಿಯಾಗಿ, ಪಕ್ಷದ ಸಂಘಟನಾ ವಿಷಯಗಳ ಕುರಿತು ಮಾರ್ಗದರ್ಶನ ಪಡೆಯಲಾಯಿತು," ಎಂದು ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Update: 2025-11-22 10:17 GMT

ಬಿ.ಎಲ್. ಸಂತೋಷ್

Click the Play button to listen to article

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಭೇಟಿಯ ಫೋಟೋವನ್ನು ಹಂಚಿಕೊಂಡಿರುವ ವಿಜಯೇಂದ್ರ ಅವರು, ಬಿ.ಎಲ್. ಸಂತೋಷ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ನಂತರ ಪಕ್ಷದ ಸಂಘಟನೆ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

"ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಸನ್ಮಾನ್ಯ ಶ್ರೀ ಬಿ.ಎಲ್. ಸಂತೋಷ್ ಜೀ ಅವರನ್ನು ಭೇಟಿಯಾಗಿ, ಪಕ್ಷದ ಸಂಘಟನಾ ವಿಷಯಗಳ ಕುರಿತು ಮಾರ್ಗದರ್ಶನ ಪಡೆಯಲಾಯಿತು," ಎಂದು ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ಮತ್ತು ಬಿ.ಎಲ್. ಸಂತೋಷ್ ಅವರ ನಡುವೆ ಹಿಂದೆ ರಾಜಕೀಯ ಭಿನ್ನಾಭಿಪ್ರಾಯಗಳಿದ್ದವು ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬಂದಿದ್ದವು. ಕಳೆದ ವಿಧಾನಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಮತ್ತು ಪಕ್ಷದ ಆಂತರಿಕ ನಿರ್ಧಾರಗಳಲ್ಲಿ ಸಂತೋಷ್ ಅವರ ಪಾತ್ರ ಯಡಿಯೂರಪ್ಪ ಬಣಕ್ಕೆ ಹಿನ್ನಡೆ ಉಂಟುಮಾಡಿತ್ತು ಎನ್ನಲಾಗಿತ್ತು. ಆದರೆ, ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರು ಸಂತೋಷ್ ಅವರನ್ನು ಭೇಟಿಯಾಗಿರುವುದು, ಪಕ್ಷದಲ್ಲಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

Tags:    

Similar News