Loksabha Election 2024 | ಚುನಾವಣೆ ನಂತರ ವಿಜಯೇಂದ್ರ ಅಧ್ಯಕ್ಷ ಸ್ಥಾನ ಕಳೆದುಕೊಳ್ಳಲಿದ್ದಾರೆ: ಈಶ್ವರಪ್ಪ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ತಮ್ಮ ಮಗನಿಗೆ ಟಿಕೆಟ್ ನೀಡಿಲ್ಲ ಎಂದು ಅಸಮಾಧಾನಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು, ಈಗಾಗಲೇ ಹಲವು ಬಾರಿ ಬಹಿರಂಗವಾಗಿಯೇ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ. ಎಸ್ ಯಡಿಯೂರಪ್ಪ ಅವರನ್ನು ಟೀಕಿಸಿದ್ದಾರೆ.;
By : The Federal
Update: 2024-03-21 08:30 GMT
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ತಮ್ಮ ಮಗನಿಗೆ ಟಿಕೆಟ್ ನೀಡಿಲ್ಲ ಎಂದು ಅಸಮಾಧಾನಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಈಗಾಗಲೇ ಹಲವು ಬಾರಿ ಬಹಿರಂಗವಾಗಿಯೇ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ. ಎಸ್ ಯಡಿರೂಪ್ಪ ಅವರನ್ನು ಟೀಕಿಸಿದ್ದಾರೆ.
ಇದೀಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಲೋಕಸಭೆಯ ಚುನಾವಣೆ ಫಲಿತಾಂಶದ ನಂತರ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈಗ ನನಗೆ ರಾಜ್ಯಪಾಲರ ಹುದ್ದೆ ಅಥವಾ ನನ್ನ ಮಗನಿಗೆ ವಿಧಾನ ಪರಿಷತ್ ಸ್ಥಾನ ಸೇರಿದಂತೆ ಯಾವ ಹುದ್ದೆ, ಗೌರವವೂ ಮುಖ್ಯವಲ್ಲ. ಪಕ್ಷ ಉಳಿಯಬೇಕು. ಈ ಕಾರಣಕ್ಕಾಗಿಯೇ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂದು ಹೇಳಿದ್ದಾರೆ.