ಮೆಟ್ರೋ 3ನೇ ಹಂತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
ಇನ್ನೇನು ಮೆಟ್ರೋ ಹಂತ 2 ಎ ಮತ್ತು 2 ಬಿ ಕಾಮಗಾರಿ ಇನ್ನೆರಡು ವರ್ಷಗಳಲ್ಲಿ ಮುಕ್ತಾಯಗೊಳ್ಳಲಿದ್ದು, ಭವಿಷ್ಯದ ಅವಶ್ಯಕತೆಯನ್ನು ಗಮನದಲ್ಲಿರಿಸಿ ಮೆಟ್ರೋ ರೈಲು ಹಂತ-3 ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.;
ಗುರುವಾರ (ಮಾರ್ಚ್ 14) ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿಗೆ ಮೆಟ್ರೋ ೩ನೇ ಹಂತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಬೆಂಗಳೂರಿನ ವಾಹನ ದಟ್ಟಣೆ ನಿವಾರಿಸುವ ಕ್ರಮವಾಗಿ ಮೆಟ್ರೋ ಮೂರನೇ ಹಂತದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ.
ಇನ್ನೇನು ಮೆಟ್ರೋ ಹಂತ 2 ಎ ಮತ್ತು 2 ಬಿ ಕಾಮಗಾರಿ ಇನ್ನೆರಡು ವರ್ಷಗಳಲ್ಲಿ ಮುಕ್ತಾಯಗೊಳ್ಳಲಿದ್ದು, ಭವಿಷ್ಯದ ಅವಶ್ಯಕತೆಯನ್ನು ಗಮನದಲ್ಲಿರಿಸಿ ಮೆಟ್ರೋ ರೈಲು ಹಂತ-3 ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆಯನ್ನು ನೀಡಿದೆ.
44.65 ಕಿ.ಮೀ ಉದ್ದದ ಎರಡು ಕಾರಿಡಾರ್ ಗಳನ್ನು (ಕಾರಿಡಾರ್-1 ಜೆಪಿನಗರ 4 ನೇ ಹಂತದಿಂದ ಕೆಂಪಾಪುರದವರೆಗೆ 32.15 ಕಿ.ಮೀ. ಹಾಗೂ ಕಾರಿಡಾರ್ -2 ಹೊಸಹಳ್ಳಿಯಿಂದ ಕಡಬಗೆರೆವರೆಗೆ 12.50 ಕಿ.ಮೀ.) ಒಟ್ಟು ಅಂದಾಜು ವೆಚ್ಚ ರೂ.15,611 ಕೋಟಿಗಳಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಮೆಟ್ರೋ 3 ಹಂತಕ್ಕೆ 2028 ರಲ್ಲಿ ಚಾಲನೆ ನೀಡುವ ಗುರಿ ಇದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ. ಈ ಯೋಜನೆಯ ಶೇ.85 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದ್ದು, ಉಳಿದ ಮೊತ್ತವನ್ನು ಕೇಂದ್ರ ಸರ್ಕಾರ ನೀಡಲಿದೆ.