ಔಷಧ ನಿಯಂತ್ರಣ, ಆಹಾರ ಸುರಕ್ಷತೆ ಇಲಾಖೆ ವಿಲೀನಕ್ಕೆ ನಿರ್ಧಾರ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರನ್ನೇ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಮುಖ್ಯಸ್ಥರನ್ನಾಗಿ ನೇಮಿಸಲು ನಿರ್ಣಯಿಸಲಾಗಿದೆ. ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲೇ ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಲು ಅನುಮೋದಿಸಲಾಗಿದೆ.;
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರನ್ನೇ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಮುಖ್ಯಸ್ಥರನ್ನಾಗಿ ನೇಮಿಸಲು ನಿರ್ಣಯಿಸಲಾಗಿದೆ. ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲೇ ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಲು ಗುರುವಾರ ಅನುಮೋದಿಸಲಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಕಾರ್ಯವೈಖರಿಗಳು ಬಹುತೇಕ ಒಂದೇ ರೀತಿಯಲ್ಲಿರುವುದರಿಂದ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಿ, ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಎಂದು ಮರು ಪದನಾಮೀಕರಿಸುವುದರಿಂದ ಇಲಾಖೆಯ ಕಾರ್ಯಗಳನ್ನು ಸುಗಮವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಜಮ್ಮು ಕಾಶ್ಮೀರ, ಗುಜರಾತ್, ಉತ್ತರ ಪ್ರದೇಶ, ಅಸ್ಸಾಂ, ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈಗಾಗಲೇ ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗಳು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯದಲ್ಲಿಯೂ ಸಹ ಔಷಧ ನಿಯಂತ್ರಣ ಇಲಾಖೆ ಮತ್ತು ಆಹಾರ ಸುರಕ್ಷತೆ ಇಲಾಖೆಗಳನ್ನು ವಿಲೀನಗೊಳಿಸುವುದು ಅಗತ್ಯವೆಂದು ಪ್ರಸ್ತಾಪಿಸಲಾಗಿತ್ತು.