CAFE BLAST | ಮಂಗಳೂರು, ಶಿವಮೊಗ್ಗಕ್ಕೆ ಎನ್ಐಎ ಅಧಿಕಾರಿಗಳ ಭೇಟಿ
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಪತ್ತೆಗಾಗಿ ಮಂಗಳೂರು, ಶಿವಮೊಗ್ಗದಲ್ಲಿ ಕೆಲವರನ್ನು ಎನ್ಐಎ ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ.;
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಪತ್ತೆಗಾಗಿ ಮಂಗಳೂರು, ಶಿವಮೊಗ್ಗದಲ್ಲಿ ಕೆಲವರನ್ನು ಎನ್ಐಎ ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ.
2022 ರ ನ.19ರಂದು ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟಕ್ಕೂ, ಕೆಫೆ ಸ್ಪೋಟಕ್ಕೂ ಸಾಮ್ಯತೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
ಕುಕ್ಕರ್ ಬಾಂಬ್ ಸ್ಪೋಟದ ಶಂಕಿತ ಶಾರೀಕ್ ಶಿವಮೊಗ್ಗದಲ್ಲಿ ಬಾಂಬ್ ಸ್ಪೋಟದ ಬಗ್ಗೆ ತರಬೇತಿ ಪಡೆದಕೊಂಡಿದ್ದು, ಸ್ಪೋಟದ ಪರೀಕ್ಷೆಯನ್ನು ನಡೆಸಿದ್ದ. ಈತನ ಜೊತೆ ಇನ್ನೂ ಕೆಲವರು ತರಬೇತಿ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅವರು ಯಾರು ಎಂಬುವುದನ್ನು ಪತ್ತೆ ಮಾಡಲು ಎನ್ಐಎ ಪಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಶಂಕಿತ ಶಾರೀಕ್ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದು, ಜೈಲಿಗೆ ಭೇಟಿ ನೀಡಿದ ಎನ್ಐಎ ಅಧಿಕಾರಿಗಳು ಆತನನ್ನು ವಿಚಾರಣೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.