CAFE BLAST | ಬಳ್ಳಾರಿಯಲ್ಲಿ ಶಂಕಿತನನ್ನು ವಶಕ್ಕೆ ಪಡೆದ ಎನ್ ಐಎ ?
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ತಂಡ ಬಳ್ಳಾರಿ ಮೂಲದ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಎನ್ ಐಎ ತಂಡ ಇಂದು ಬೆಳಿಗ್ಗೆ ನಸುಕಿನ ಜಾವ 4 ಗಂಟೆಗೆ ಬಳ್ಳಾರಿಯಲ್ಲಿ ಶಬ್ಬೀರ್ ಎಂಬಾತನನ್ನು ವಶಕ್ಕೆ ಪಡೆದಿದ್ದು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ.
ಮಾರ್ಚ್ 1ರಂದು ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ನಡೆದಿತ್ತು. ಪ್ರಕರಣವನ್ನು ಸರ್ಕಾರ ಎನ್ ಐಎ ತನಿಖೆಗೆ ವಹಿಸಿದೆ. ಆರೋಪಿಯ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗುತ್ತಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಬಳ್ಳಾರಿಯಲ್ಲಿ ಓರ್ವ ಶಂಕಿತನನ್ನು ಎನ್ ಐಎ ವಶಕ್ಕೆ ಪಡೆದಿದೆ ಎಂಬ ವರದಿಗಳಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.