ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ, ಬಂಧಿತರ ಸಂಖ್ಯೆ 6ಕ್ಕೆ

Update: 2024-05-10 07:34 GMT
ಹೆಣ್ಣು ಭ್ರೂಣ ಹತ್ಯೆ

ಕರ್ನಾಟಕದಲ್ಲಿ ಮತ್ತೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ.

ಮಂಡ್ಯದ ಪಾಂಡವಪುರ ಪಟ್ಟಣದ ಆರೋಗ್ಯ ಇಲಾಖೆಯ ವಸತಿ ಸಮುಚ್ಛಯದಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ಏರಿದೆ. ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ನವೀನ್ ಕುಮಾರ್, ಕುಮಾರ್ ಎಂಬವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಬಂಧಿಸಲಾಗಿರುವ ನವೀನ್ ಕುಮಾರ್ ಎಂಬ ವ್ಯಕ್ತಿ ಹಿಂದೆಯೂ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಕೇಳಿಬಂದಿತ್ತು. ಈ ಹಿಂದೆ ಬಂಧನಕ್ಕೆ ಒಳಪಟ್ಟು ಜಾಮೀನಿನ ಆಧಾರದ ಮೇಲೆ ಹೊರಗೆ ಬಂದಿದ್ದು, ಮತ್ತೆ ಹೆಣ್ಣು ಭ್ರೂಣ ಹತ್ಯೆಯಲ್ಲಿ ತೊಡಗಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ವಾಹನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ನವೀನ್ ಗರ್ಭಪಾತಕ್ಕೆ ಒಳಗಾಗುವವರನ್ನು ರಹಸ್ಯ ಸ್ಥಳಕ್ಕೆ ಕರೆದುಕೊಂಡು ಹೋಗುತ್ತಿದ್ದ, ಇದಕ್ಕೆ ಕುಮಾರ್ ಸಹಕರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸ ವಾಹನ ಚಾಲಕನ ನೇಮಕ

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಚಾಲಕನೂ ಭಾಗಿಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಚಾಲಕನ್ನು ಕೆಲಸದಿಂದ ವಜಾಮಾಡಲಾಗಿದ್ದು, ಬೇರೆ ವಾಹನ ಚಾಲಕನ್ನು ನೇಮಕ ಮಾಡುವುದಾಗಿ ಹೊರಗುತ್ತಿಗೆ ಏಜೆನ್ಸಿಯ ವ್ಯವಸ್ಥಾಪಕರು ಡಿಎಚ್ಒ ಡಾ.ಕೆ.ಮೋಹನ್ ಅವರಿಗೆ ಪತ್ರ ಬರೆದಿರುವುದು ವರದಿಯಾಗಿದೆ.

ಪ್ರಕರಣದ ಹಿನ್ನೆಲೆ ಏನು ?

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಭೂಣ್ರ ಲಿಂಗ ಪರೀಕ್ಷೆ ಹಾಗೂ ಕಾನೂನು ಬಾಹಿರ ಗರ್ಭಪಾತ ನಡೆಯುತ್ತಿರುವುದು ಬೆಳಕಿಗೆ ಬಂದಿತ್ತು. ಪಾಂಡವಪುರದ ಆಸ್ಪತ್ರೆಯ ಸಿಬ್ಬಂದಿಯ ವಸತಿ ಗೃಹದಲ್ಲೇ ಈ ಕೃತ್ಯ ನಡೆಯುತ್ತಿರುವುದು ಕಂಡುಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡವಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಇಬ್ಬರು ನೌಕರರನ್ನು ಸೇವೆಯಿಂದ ವಜಾ ಮಾಡಲಾಗಿದ್ದು, ಒಟ್ಟು ಆರು ಜನರನ್ನು ಇಲ್ಲಿಯವರೆಗೆ ಬಂಧಿಸಲಾಗಿದೆ.

Tags:    

Similar News