ಸಿಸಿಬಿ ಕಾರ್ಯಾಚರಣೆ: 1.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ, ವಿದೇಶಿಗರು ಸೇರಿ 9 ಮಂದಿ ಬಂಧನ

ಕಾರ್ಯಾಚರಣೆಯಲ್ಲಿ 506 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, 50 ಎಲ್‌ಎಸ್‌ಡಿ ಸ್ಟ್ರಿಪ್ಸ್, 85 ಗ್ರಾಂ ಕೊಕೇನ್, ಮತ್ತು 56 ಗ್ರಾಂ ಹೈಡ್ರೋಗಾಂಜಾ ಸೇರಿದಂತೆ ಒಟ್ಟು 1.5 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.;

Update: 2025-09-10 05:12 GMT

ಸಿಸಿಬಿ ಪೊಲೀಸರು ವಶಪಡಿಸಿಕೊಂಡಿರುವ ಮಾದಕ ವಸ್ತುಗಳನ್ನು ಬೆಂಗಳೂರು ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಪರಿಶೀಲನೆ ಮಾಡಿದರು.

Click the Play button to listen to article

ಮಾದಕ ವಸ್ತುಗಳ ಸರಬರಾಜುದಾರರ ವಿರುದ್ಧ ಸಮರ ಮುಂದುವರಿಸಿರುವ ಸಿಸಿಬಿ ಪೊಲೀಸರು, ಕಳೆದ ಎರಡು ವಾರಗಳಲ್ಲಿ ಬೆಂಗಳೂರಿನ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಒಂಬತ್ತು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ 506 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, 50 ಎಲ್‌ಎಸ್‌ಡಿ ಸ್ಟ್ರಿಪ್ಸ್, 85 ಗ್ರಾಂ ಕೊಕೇನ್, ಮತ್ತು 56 ಗ್ರಾಂ ಹೈಡ್ರೋಗಾಂಜಾ ಸೇರಿದಂತೆ ಒಟ್ಟು 1.5 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆ.ಎಸ್. ಲೇಔಟ್, ಅವಲಹಳ್ಳಿ, ಅಮೃತಹಳ್ಳಿ, ಹೆಬ್ಬಗೋಡಿ, ಮೈಕೋ ಲೇಔಟ್ ಹಾಗೂ ರಾಮಮೂರ್ತಿನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿಯ ಮಾದಕ ಪದಾರ್ಥ ನಿಗ್ರಹ ದಳ ಈ ಕಾರ್ಯಾಚರಣೆ ನಡೆಸಿದೆ. ಈ ವೇಳೆ, ರಾಮಮೂರ್ತಿನಗರ ವ್ಯಾಪ್ತಿಯ ಲಾಡ್ಜ್‌ವೊಂದರಲ್ಲಿ ಮಾದಕ ಪದಾರ್ಥಗಳ ಸೇವನೆ ಮತ್ತು ಮಾರಾಟಕ್ಕೆ ಅವಕಾಶ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಡ್ರಗ್ ಪೆಡ್ಲರ್‌ಗಳೊಂದಿಗೆ ಲಾಡ್ಜ್ ಸಿಬ್ಬಂದಿ ಸಂಪರ್ಕ ಹೊಂದಿರುವುದು ಖಚಿತಪಟ್ಟಿದ್ದು, ಸದ್ಯಕ್ಕೆ ಲಾಡ್ಜ್ ಅನ್ನು ಸೀಜ್ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Similar News