ಕೇಂದ್ರ ಸರ್ಕಾರದ ಕೈವಾಡ: ಪ್ರಿಯಾಂಕ್‌ ಖರ್ಗೆ ಆರೋಪ

Update: 2024-08-17 07:06 GMT

ರಾಜ್ಯಪಾಲರ ನಿರ್ಧಾರದ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲರ ನಿರ್ಧಾರದ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲರ ವಿರುದ್ಧ ಇಡೀ ಕಾಂಗ್ರೆಸ್‌ ಪಾಳಯವೇ ಮುಗಿಬಿದ್ದಿದ್ದು, ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಿಯಾಂಕ್‌ ಖರ್ಗೆ ಅವರು, ʻʻಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿಯ ದಾಳವಾಗಿ ರಾಜಭವನವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ರಾಜ್ಯದ ಸಾಂವಿಧಾನಿಕ ಉನ್ನತ ಹುದ್ದೆಯಲ್ಲಿರುವವರು ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸುತ್ತಿದ್ದಾರೆʼʼ ಎಂದು ಹೇಳಿದ್ದಾರೆ.

ʻʻಕೇಂದ್ರ ಸರ್ಕಾರವು ತನ್ನೆಲ್ಲ ಪ್ರಯತ್ನವನ್ನು ಮಾಡಬಹುದು. ಆದರೆ ನಾವು ಸಂವಿಧಾನದ ಪರವಾಗಿ ದೃಢವಾಗಿ ನಿಲ್ಲುತ್ತೇವೆʼʼ ಎಂದು ಅವರು ಹೇಳಿದ್ದಾರೆ.

Tags:    

Similar News