ಕೇಂದ್ರ ಸರ್ಕಾರ ಅದಾನಿ ರಕ್ಷಣೆಗೆ ನಿಂತಿದೆ: ಡಿಸಿಎಂ ಡಿಕೆ ಶಿವಕುಮಾರ್ ಆರೋಪ
ಅದಾನಿ ಅವರನ್ನು ಪ್ರಧಾನಿ ಮೋದಿ ಇನ್ನೆಷ್ಟು ದಿನ ರಕ್ಷಣೆ ಮಾಡುತ್ತಾರೆ? ಈಗಲಾದರೂ ಅವರನ್ನು ಬಂಧಿಸಿ, ದೇಶದ ಗೌರವ ಉಳಿಸಬೇಕು. ಕಾನೂನು ಕ್ರಮಕ್ಕೆ ಒಳಪಡಿಸಬೇಕು' ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಅದಾನಿ ಅವರನ್ನು ಪ್ರಧಾನಿ ಮೋದಿ ಇನ್ನೆಷ್ಟು ದಿನ ರಕ್ಷಣೆ ಮಾಡುತ್ತಾರೆ? ಈಗಲಾದರೂ ಅವರನ್ನು ಬಂಧಿಸಿ, ದೇಶದ ಗೌರವ ಉಳಿಸಬೇಕು. ಕಾನೂನು ಕ್ರಮಕ್ಕೆ ಒಳಪಡಿಸಬೇಕು' ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅದಾನಿ ಅವರ ಆಸ್ತಿಗಳು ರಾಜ್ಯದಲ್ಲಿದ್ದು ಅದನ್ನು ಮುಟ್ಟುಗೋಲು ಹಾಕಿಕೊಳ್ಳುವ ತಾಕತ್ತಿದೆಯೇ ಎಂಬ ಬಿಜೆಪಿ ನಾಯಕರ ಸವಾಲಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, ಕೇಂದ್ರ ಸರ್ಕಾರ ಮೊದಲು ತನಿಖೆ ಆರಂಭಿಸಿ, ತಮ್ಮ ಕರ್ತವ್ಯ ಮಾಡಲಿ. ತನಿಖೆ ಆರಂಭಿಸಿ ನಮ್ಮ ರಾಜ್ಯ ಸರ್ಕಾರಕ್ಕೆ ಈ ವಿಚಾರವಾಗಿ ಪತ್ರ ಬರೆದರೆ ನಮ್ಮ ಸರ್ಕಾರ ಈ ವಿಚಾರದಲ್ಲಿ ಕ್ರಮ ಕೈಗೊಳ್ಳಲಿದೆ. ಇಷ್ಟು ದಿನ ಅವರು ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಈಗ ಕ್ರಮ ಕೈಗೊಳ್ಳಲು ಮುಂದಾಗಲಿ ಎಂದು ಅವರು ತಿಳಿಸಿದರು.
“ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕಳೆದ ಏಳೆಂಟು ವರ್ಷಗಳಿಂದ ನಿರಂತರವಾಗಿ ಅದಾನಿ ಅವರ ಕಂಪನಿಗಳ ಬಗ್ಗೆ ಆರೋಪ ಮಾಡಿ ಜನರ ಗಮನ ಸೆಳೆಯುತ್ತಿದ್ದರು. ಕೇಂದ್ರ ತನಿಖಾ ಸಂಸ್ಥೆಗಳು ಈ ವಿಚಾರವಾಗಿ ಕ್ರಮ ಕೈಗೊಂಡಿಲ್ಲ. ಈ ವಿಚಾರ ಸಂಸತ್ತಿನಿಂದ ಬೀದಿಗಳ ವರೆಗೂ ಚರ್ಚೆಯಾಯಿತು ಎಂದು ತಿಳಿಸಿದರು.
'ಅದಾನಿ ಸಮೂಹದ ಹೂಡಿಕೆ ಕುರಿತು 'ಇನ್ವೆಸ್ಟ್ ಕರ್ನಾಟಕ' ಕಾರ್ಯಕ್ರಮದಲ್ಲಿ ಚರ್ಚೆ ಮಾಡುತ್ತೇವೆ. ಪಾರದರ್ಶಕವಾಗಿ ನಡೆಯುವ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಆಕ್ಷೇಪ ಮಾಡುವುದಿಲ್ಲ' ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.