UGCET 2025 | ಸಿಇಟಿ ದಾಖಲೆ ಪರಿಶೀಲನೆ; ಜಮ್ಮು ವಿದ್ಯಾರ್ಥಿಗಳಿಗೆ ಆತಂಕ ಬೇಡ- ಕೆಇಎ

ಜಮ್ಮು ಕಾಶ್ಮೀರದ ಒಟ್ಟು 204 ಮಂದಿ ಪರೀಕ್ಷೆ ಬರೆದಿದ್ದು, ಕೇವಲ 52 ಮಂದಿ ಮಾತ್ರ ದಾಖಲೆ ಪರಿಶೀಲನೆಗೆ ಹಾಜರಾಗಿದ್ದಾರೆ. ಗಡಿ ಭಾಗದಲ್ಲಿ ಉದ್ವಿಗ್ನತೆ ಹೆಚ್ಚಿರುವ ಕಾರಣಕ್ಕೆ ಅವರಿಗೆ ಮತ್ತೊಂದು ಅವಕಾಶ ನೀಡಲಾಗುವುದು ಎಂದು ಕೆಇಎ ತಿಳಿಸಿದೆ.;

Update: 2025-05-10 06:18 GMT
ಸಿಇಟಿ ಬರೆಯುತ್ತಿರುವ ವಿದ್ಯಾರ್ಥಿಗಳು

ಗಡಿಯಲ್ಲಿ ಭಾರತ-ಪಾಕಿಸ್ತಾನ ಸೇನಾ ಉದ್ವಿಗ್ನತೆಯಿಂದ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳಿಗೆ ಯುಜಿಸಿಇಟಿ-25 ಪ್ರವೇಶ ಸಲುವಾಗಿ ನಡೆಸುವ ಮೂಲ ದಾಖಲೆಗಳ ಪರಿಶೀಲನೆಗೆ ಮತ್ತೊಮ್ಮೆ ಅವಕಾಶ ನೀಡಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪ್ರಸಕ್ತ ಸಾಲಿನ ಸಿಇಟಿ ಸಲುವಾಗಿ ಜಮ್ಮು ಕಾಶ್ಮೀರದ ಒಟ್ಟು 204 ಮಂದಿ ಪರೀಕ್ಷೆ ಬರೆದಿದ್ದು, ಅವರಲ್ಲಿ ಇದುವರೆಗೂ ಕೇವಲ 52 ಮಂದಿ ಮಾತ್ರ ದಾಖಲೆ ಪರಿಶೀಲನೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ. ಗಡಿ ಭಾಗದಲ್ಲಿ ಉದ್ವಿಗ್ನತೆ ಹೆಚ್ಚಿರುವ ಕಾರಣಕ್ಕೆ ಅವರಿಗೆ ಮತ್ತೊಂದು ಅವಕಾಶ ನೀಡಲಾಗುವುದು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಸನ್ನ ತಿಳಿಸಿದರು.

ಒಂದು ವೇಳೆ 10 ರಿಂದ15 ದಿನಗಳ‌ ನಂತರವೂ ಪರಿಸ್ಥಿತಿ ಸುಧಾರಿಸದೇ ಇದ್ದರೆ ವಿಡಿಯೊ ಸಂವಾದದ ಮೂಲಕವೇ ದಾಖಲೆಗಳ ಪರಿಶೀಲನೆ ಮಾಡಲಾಗುವುದು. ಒಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಲಾಗುವುದು. ಈ ಕುರಿತು ಎಲ್ಲ ಅಭ್ಯರ್ಥಿಗಳಿಗೆ ಪ್ರತ್ಯೇಕ ಸಂದೇಶ ಕಳುಹಿಸಲಾಗಿದೆ ಎಂದು ಹೇಳಿದರು.

ಪಹಲ್ಗಾಮ್‌ ಉಗ್ರರ ದಾಳಿಯ ನಂತರ ಭಾರತೀಯ ಸೇನಾಪಡೆ ಮೇ7 ರಂದು ʼಆಪರೇಷನ್‌ ಸಿಂದೂರʼ ಹೆಸರಿನಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿ ನೂರಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿತ್ತು.

ಪ್ರತೀಕಾರವಾಗಿ ಪಾಕಿಸ್ತಾನ ಜಮ್ಮು ಕಾಶ್ಮೀರದ ಫೂಂಚ್‌, ಬಾರಾಮುಲ್ಲಾ, ಜಲಂಧರ್‌, ಲೂಧಿಯಾನ,  ಪಂಜಾಬಿನ ಅಮೃತಸರ, ರಾಜಸ್ತಾನದ ಜೈಸ್ಮೆಲೆರ್‌ ಸೇರಿದಂತೆ ಗಡಿಭಾಗದಲ್ಲಿ ಪಾಕಿಸ್ತಾನ ಡ್ರೋಣ್‌ ದಾಳಿ ಮುಂದುವರೆಸಿದೆ.

Tags:    

Similar News