ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರು ವಿದ್ಯಾರ್ಥಿಗಳ ಮೇಲುಗೈ
ಏಪ್ರಿಲ್ 18, 19 ಹಾಗೂ 20ರಂದು ಸಿಇಟಿ ಪರೀಕ್ಷೆ ನಡೆದಿದ್ದು, ಇದರಲ್ಲಿ ಸುಮಾರು 3.28 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.;
2024ನೇ ಸಾಲಿನ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ (ಜೂ.1) ಬಿಡುಗಡೆ ಮಾಡಿದೆ.
ಏಪ್ರಿಲ್ 18, 19 ಹಾಗೂ 20ರಂದು ಸಿಇಟಿ ಪರೀಕ್ಷೆ ನಡೆದಿದ್ದು, ಇದರಲ್ಲಿ ಸುಮಾರು 3.28 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಇದೀಗ ಶನಿವಾರ ಎಕ್ಸ್‌ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫಲಿತಾಂಶ ಪ್ರಕಟವಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್ http://karresults.nic.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಇನ್ನು ಸಿಇಟಿ 2024ರಲ್ಲಿ ಬೆಂಗಳೂರಿನ ಸಹಕಾರ ನಗರದ ನಾರಾಯಣ ಒಲಿಂಪಿಯಾಡ್ ಶಾಲೆಯ ವಿದ್ಯಾರ್ಥಿ ಹರ್ಷ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಮಾರತ್‌ಹಳ್ಳಿಯ ಚೈತನ್ಯ ಟೆಕ್ನೋ ಶಾಲೆಯ ಮನೋಜ್ ದ್ವಿತೀಯ ಸ್ಥಾನ, ಜಯನಗರ ನೆಹರು ಸ್ಮಾರಕ ವಿದ್ಯಾಲಯದ ಅಭಿನವ್ ತೃತೀಯ ಸ್ಥಾನ ಪಡೆದಿದ್ದಾರೆ.