ಚಾಮರಾಜನಗರ ಶಾಸಕನಿಗೆ ಪುತ್ರ ವಿಯೋಗ
ಕಳೆದ ಒಂದೂವರೆ ತಿಂಗಳಿನಿಂದ ಅನಾರೋಗ್ಯದಿಂದಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಚಾಮರಾಜ್ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಇಹಲೋಕ ತ್ಯಜಿಸಿದ್ದಾರೆ.;
By : The Federal
Update: 2025-05-12 11:03 GMT
ಚಾಮರಾಜ್
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಅವರ ಹಿರಿಯ ಪುತ್ರ ಚಾಮರಾಜ್ ( (42) ಸೋಮವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.
ಅವರು ಮಧುಮೇಹದಿಂದ ಬಳಲುತ್ತಿದ್ದು, ಕಳೆದ ಒಂದೂವರೆ ತಿಂಗಳಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಇಹಲೋಕ ತ್ಯಜಿಸಿದ್ದಾರೆ. ಚಾಮರಾಜ್ ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸೋಮವಾರ ಸಂಜೆ 6ಗಂಟೆಗೆ ಯಳಂದೂರು ತಾಲೂಕಿನ ಸ್ವಗ್ರಾಮ ಉಪ್ಪಿನಮೋಳೆಯಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 13ರಂದು ಸಂಜೆ ಉಪ್ಪಿನಮೋಳೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.