Chennai Train Accident | ಮುಂಜಾಗ್ರತೆ ಅಗತ್ಯವೆಂದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
ಲೋಕಾಯುಕ್ತ ಎಡಿಜಿಪಿ ಅವರ ದೂರಿನ ಕುರಿತು ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ಅವರು, ನಾವು ಯಾವುದೇ ಬೆದರಿಕೆಯನ್ನು ಹಾಕಿಲ್ಲ ಇರುವ ವಾಸ್ತವವನ್ನು ಹೇಳಿದ್ದೇವೆ. ಕಾನೂನಿನ ಮೇಲೆ ನಂಬಿಕೆ ಇದೆ. ನ್ಯಾಯಾಲಯದಲ್ಲಿ ನಮ್ಮ ವಕೀಲರು ನೋಡಿಕೊಳ್ಳುತ್ತಾರೆ ಎಂದಿದ್ದಾರೆ
ಶುಕ್ರವಾರ ರಾತ್ರಿ 8.30ರ ಸುಮಾರಿಗೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪೇಟೈನಲ್ಲಿ ನಡೆದ ರೈಲು ಅಪಘಾತ ಇಲಾಖೆಯ ನಿರ್ಲಕ್ಷ್ಯ ಮತ್ತು ಉದಾಸೀನ ಧೋರಣೆಯನ್ನು ಮತ್ತೆ ಬಯಲು ಮಾಡಿದೆ.
ಕಳೆದ ಒಂದು ವರ್ಷದ ಅವಧಿಯಲ್ಲೇ ಸರಣಿ ರೈಲು ಅಪಘಾತಗಳಲ್ಲಿ ಅನೇಕಋು ಜೀವ ಕಳೆದುಕೊಂಡರೂ, ಕೇಂದ್ರ ಸರ್ಕಾರ ಯಾವುದೇ ಪಾಠವನ್ನು ಕಲಿಯಲಿಲ್ಲ. ಘಟನೆಗೆ ಮುಂಜಾಗ್ರತೆ ವಹಿಸುತ್ತಿಲ್ಲ. ಈ ಸರ್ಕಾರ ಎಚ್ಚೆತ್ತುಕೊಳ್ಳುವ ಮುನ್ನ ಇನ್ನೂ ಎಷ್ಟು ಕುಟುಂಬಗಳು ಬಲಿಯಾಗಬೇಕು? ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಿಡಿಕಾರಿರುವ ಬೆನ್ನಲ್ಲೇ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಈ ರೀತಿ ಘಟನೆಗಳು ಮರುಕಳಿಸದಂತೆ ರೈಲ್ವೆ ಇಲಾಖೆ ಸಿಬ್ಬಂದಿ ಮುಂಜಾಗ್ರತೆ ವಹಿಸುವಂತೆ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಬೆದರಿಕೆ ಹಾಕಿಲ್ಲ
ಲೋಕಾಯುಕ್ತ ಎಡಿಜಿಪಿ ಅವರ ದೂರಿನ ಕುರಿತು ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ಅವರು, ನಾವು ಯಾವುದೇ ಬೆದರಿಕೆಯನ್ನು ಹಾಕಿಲ್ಲ. ಇರುವ ವಾಸ್ತವವನ್ನು ಹೇಳಿದ್ದೇವೆ. ಕಾನೂನಿನ ಮೇಲೆ ನಂಬಿಕೆ ಇದೆ. ನ್ಯಾಯಾಲಯದಲ್ಲಿ ನಮ್ಮ ವಕೀಲರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಅವರನ್ನು ರಕ್ಷಿಸುತ್ತಿದೆ. ಹಲವು ವರ್ಷಗಳಿಂದ ರಾಜಕೀಯ ಪ್ರೇರಿತ ದೂರು ನೀಡಲಾಗುತ್ತದೆ. ನಾವು, ಓಡಿ ಹೋಗಿಲ್ಲ. ನ್ಯಾಯಾಲಯದಲ್ಲಿ ಎದುರಿಸುತ್ತೇವೆ ಎಂದಿದ್ದಾರೆ.