ಕಲ್ಯಾಣ ಕರ್ಣಾಟಕದಲ್ಲಿ ಪ್ರವಾಹ: ಹಾನಿ ಬಗ್ಗೆ ವೀಕ್ಷಣೆ ನಡೆಸಲಿರುವ ಮುಖ್ಯಮಂತ್ರಿ

ರಾಜ್ಯದ ಹಲವೆಡೆ ಮಾತ್ರವಲ್ಲದೇ ನೆರೆ ರಾಜ್ಯ ಮಹಾರಾಷ್ಟ್ರ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಕಲಬುರಗಿ, ಯಾದಗಿರಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

Update: 2025-09-29 15:03 GMT
Click the Play button to listen to article

ರಾಜ್ಯದ ಹಲವೆಡೆ ಮಾತ್ರವಲ್ಲದೇ ನೆರೆ ರಾಜ್ಯ ಮಹಾರಾಷ್ಟ್ರ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಕಲಬುರಗಿ, ಯಾದಗಿರಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಪರಿಸ್ಥಿತಿ ನಿಭಾಯಿಸಲು ತುರ್ತು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಗಳವಾರ ಪ್ರವಾಹ ಪರಿಸ್ಥಿತಿ ಅವಲೋಕಿಸಲು ಕಲಬುರಗಿಗೆ ತೆರಳುತ್ತಿದ್ದಾರೆ. 

ಕಲಬುರಗಿ ಜಿಲ್ಲೆಯ ವಿವಿಧೆಡೆ ವೈಮಾನಿಕ ಸಮೀಕ್ಷೆ ನಡೆಸಲಿದ್ದು, ಒಟ್ಟು 11 ಕಡೆ ವೈಮಾನಿಕ ಸಮೀಕ್ಷೆ ನಡೆಸುವ ಸ್ಥಳಗಳನ್ನು ಗುರುತಿಸಲಾಗಿದೆ. ಪ್ರವಾಹಪೀಡಿತ ಪ್ರದೇಶಗಳ ಸರ್ವೇ ಕಾರ್ಯವನ್ನು  ಮಳೆ ನಿಂತ ಬಳಿಕ ಮಾಡಲಾಗುವುದು. ಆ ಬಳಿಕವಷ್ಟೇ  ಪ್ರವಾಹದಿಂದ ಆದ ಹಾನಿ ಬಗ್ಗೆ ಅಂದಾಜು ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಬೆಳೆ ಮತ್ತು ಆಸ್ತಿ ಹಾನಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳು ವಿವರಿಸಲಿದ್ದಾರೆ.  

Tags:    

Similar News