ಬೆಂಗಳೂರಿನಲ್ಲಿ ಶಾಲೆಗೆ ಬಾಂಬ್ ಬೆದರಿಕೆ; ಮಕ್ಕಳಿಗೆ ರಜೆ, ಬಾಂಬ್ ನಿಷ್ಕ್ರೀಯ ದಳದಿಂದ ಪರಿಶೀಲನೆ

ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶ್ವಾನದಳ ಹಾಗೂ ಬಾಂಬ್ ನಿಷ್ಕ್ರೀಯ ದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.;

Update: 2025-07-22 07:53 GMT

ಸಾಂದರ್ಭಿಕ ಚಿತ್ರ

ಬೆಂಗಳೂರಿನ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದ ಬೆನ್ನಲ್ಲೇ ಇದೀಗ ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. 

ವರ್ತೂರು ಸಮೀಪದ ಕ್ರಿಸಲಿಸ್ ಪ್ರೌಢಶಾಲೆ​ಗೆ ಬಾಂಬ್ ಇಟ್ಟಿರುವುದಾಗಿ ಇ- ಮೇಲ್‌ ಮೂಲಕ ಬೆದರಿಕೆ ಸಂದೇಶ ಬಂದಿದೆ. ಇ- ಮೇಲ್ ಸಂದೇಶ ನೋಡಿದ ಕೂಡಲೇ ಎಚ್ಚೆತ್ತುಕೊಂಡ ಶಾಲಾ ಆಡಳಿತ ಮಂಡಳಿ ಶಾಲೆಗೆ ರಜೆ ನೀಡಿದ್ದು, ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ಹಾಗೂ ಪೊಲೀಸರು ಪರಿಶೀಲನೆ ನಡೆಸಿದರು.  

ಹುಸಿ ಸಂದೇಶ 

ಪೊಲೀಸರ ಪರಿಶೀಲನೆ ವೇಳೆ ಶಾಲೆಯಲ್ಲಿ ಯಾವುದೇ ಬಾಂಬ್​ ಪತ್ತೆಯಾಗಿಲ್ಲ, ಹುಸಿ ಬಾಂಬ್‌ ಸಂದೇಶ  ಎನ್ನಲಾಗುತ್ತಿದ್ದು, ದೂರು ದಾಖಲಿಸಿಕೊಂಡ ವರ್ತೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ನಾಲ್ಕು ದಿನಗಳ ಹಿಂದೆ ಬೆಂಗಳೂರು ನಗರದಲ್ಲಿರುವ RR ನಗರ, ಕೆಂಗೇರಿ ಸೇರಿದಂತೆ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಮೂಲಕ ಹುಸಿ ಬಾಂಬ್​ ಬೆದರಿಕೆ ಬಂದಿತ್ತು. ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಪರಿಶೀಲನೆ ನಡೆಸಿದ್ದರು. ತರಗತಿಯಲ್ಲಿರುವ ಮಕ್ಕಳ ಬ್ಯಾಗ್​ಗಳಲ್ಲೇ ಸ್ಫೋಟಕ ಇಟ್ಟಿರುವುದಾಗಿ ಸಂದೇಶದಲ್ಲಿ ಬರೆಯಲಾಗಿತ್ತು. ಈ ರೀತಿ ಇ-ಮೇಲ್ ಮಾಡಿದ್ದು ಒಬ್ಬ ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿ ಎಂಬುದು ತನಿಖೆಯಿಂದ ತಿಳಿದುಬಂದಿತ್ತು. 

Tags:    

Similar News