ಮುರುಘಾಶ್ರೀ ಪ್ರಕರಣ |ಮೊದಲ ಪೋಕ್ಸೋ ಪ್ರಕರಣದ ತೀರ್ಪು ಇಂದು ಪ್ರಕಟ

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ, ಶರಣರ ವಿರುದ್ಧ ದಾಖಲಾಗಿರುವ ಎರಡು ಪೋಕ್ಸೋ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ವಿಚಾರಣೆಯನ್ನು ವಿಸ್ತೃತವಾಗಿ ನಡೆಸಲಾಗಿದೆ.

Update: 2025-11-26 04:53 GMT

ಶಿವಮೂರ್ತಿ ಮುರುಘಾ ಶರಣರ

Click the Play button to listen to article

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತೀರ್ಪು ಇಂದು (ಬುಧವಾರ) ಪ್ರಕಟವಾಗಲಿದೆ.

ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗಂಗಾಧರಪ್ಪ ಹಡಪದ್ ಅವರು ಬೆಳಗ್ಗೆ 11 ಗಂಟೆಗೆ ಮಹತ್ವದ ಆದೇಶ ನೀಡಲಿದ್ದಾರೆ.

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ, ಶರಣರ ವಿರುದ್ಧ ದಾಖಲಾಗಿರುವ ಎರಡು ಪೋಕ್ಸೋ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ವಿಚಾರಣೆಯನ್ನು ವಿಸ್ತೃತವಾಗಿ ನಡೆಸಲಾಗಿದೆ. ನವೆಂಬರ್ 18 ರಂದು ಸರ್ಕಾರಿ ಅಭಿಯೋಜಕರ ಅಂತಿಮ ವಾದ ಆಲಿಸಿದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿದ್ದರು.

ಶರಣರ ಪರವಾಗಿ ವಕೀಲ ಸಿ.ವಿ ನಾಗೇಶ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ 

2022ರ ಆಗಸ್ಟ್‌ನಲ್ಲಿ ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ಮುಖಾಂತರ ಮುರುಘಾ ಮಠದ ವಸತಿ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯರು ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ದೂರು ದಾಖಲಿಸಿದ್ದರು. ಈ ಸಂಬಂಧ ಅವರನ್ನು 2022ರ ಸೆಪ್ಟೆಂಬರ್ 1 ರಂದು ಬಂಧಿಸಲಾಗಿತ್ತು.

ಇದು ಶರಣರ ವಿರುದ್ಧ ದಾಖಲಾಗಿರುವ ಎರಡು ಪ್ರತ್ಯೇಕ ಪೋಕ್ಸೋ ಪ್ರಕರಣಗಳ ಪೈಕಿ ಮೊದಲನೆಯದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಿಂದ ಅವರಿಗೆ ಜಾಮೀನು ದೊರೆತಿದ್ದರೂ, ಅದನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿ, ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೆ ಶರಣರು ನ್ಯಾಯಾಂಗ ಬಂಧನದಲ್ಲಿರುವಂತೆ ಆದೇಶ ನೀಡಿತ್ತು. ಜೊತೆಗೆ, ವಿಚಾರಣಾ ನ್ಯಾಯಾಲಯಕ್ಕೆ ನಾಲ್ಕು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ನಿರ್ದೇಶಿಸಿತ್ತು.

Tags:    

Similar News